ವಾಣಿ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿನಿಯರು ಪ್ರಾಥಮಿಕ ಶಾಲಾ ವಿಭಾಗದ ವಾಲಿಬಾಲ್ ಪಂದ್ಯಾಟದಲ್ಲಿ ಜಿಲ್ಲಾ ಮಟ್ಟಕ್ಕೆ ಆಯ್ಕೆ.

0

ಬೆಳ್ತಂಗಡಿ: ದಿನಾಂಕ ಸೆಪ್ಟೆಂಬರ್ 10, 2026ರಂದು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ, ಕೂಕ್ರಬೆಟ್ಟುವಿನಲ್ಲಿ ನಡೆದ ಬೆಳ್ತಂಗಡಿ ತಾಲೂಕು ಮಟ್ಟದ ಪ್ರಾಥಮಿಕ ಶಾಲಾ ವಿಭಾಗದ ಬಾಲಕಿಯರ ವಾಲಿಬಾಲ್ ಪಂದ್ಯಾಟದಲ್ಲಿ ವಾಣಿ ಆಂಗ್ಲ ಮಾಧ್ಯಮ ಶಾಲೆಯ ಬಾಲಕಿಯರ ತಂಡವು ದ್ವಿತೀಯ ಸ್ಥಾನವನ್ನು ಪಡೆದುಕೊಂಡು ಹೆಮ್ಮೆಯ ಸಾಧನೆ ಮಾಡಿದೆ.​

ಪಂದ್ಯಾಟದಲ್ಲಿ ಅತ್ಯುತ್ತಮ ಪ್ರತಿಭೆ ಮೆರೆದ ವಾಣಿ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿನಿಯರಾದ 8ನೇ ತರಗತಿಯ ಕು. ಅನ್ವಿತಾ ಜೈನ್, ಕು. ಆತ್ಮ ಶೆಟ್ಟಿ, ಕು. ಸುಮತಿ ಹಾಗೂ 7ನೇ ತರಗತಿಯ ಕು. ವಿಸ್ಮಾ ರೈ ಮತ್ತು ಕು. ಮಾನ್ವಿ ಪಿ. ಅವರು ಮುಂಬರಲಿರುವ ಜಿಲ್ಲಾ ಮಟ್ಟದ ವಾಲಿಬಾಲ್ ಪಂದ್ಯಾಟಕ್ಕೆ ಅಧಿಕೃತವಾಗಿ ಆಯ್ಕೆಯಾಗಿರುತ್ತಾರೆ.

LEAVE A REPLY

Please enter your comment!
Please enter your name here