ಸೃಷ್ಟಿ ಸಂಜೀವಿನಿ ಒಕ್ಕೂಟದ ವಾರ್ಷಿಕ ಮಹಾಸಭೆ

0

ಶಿಶಿಲ: ಸೃಷ್ಟಿ ಸಂಜೀವಿನಿ ಗ್ರಾಮ ಪಂಚಾಯಿತಿ ಮಟ್ಟದ ಒಕ್ಕೂಟ (ರಿ.), ಶಿಶಿಲ ಇದರ 2025–26ನೇ ಸಾಲಿನ ವಾರ್ಷಿಕ ಮಹಾಸಭೆ ಒಕ್ಕೂಟದ ಅಧ್ಯಕ್ಷೆ ಮೀನಾಕ್ಷಿ ಬೈರಕಟ್ಟ ಅವರ ಅಧ್ಯಕ್ಷತೆಯಲ್ಲಿ ಶಿಶಿಲ ಗ್ರಾಮ ಪಂಚಾಯಿತಿ ಸಭಾಂಗಣದಲ್ಲಿ ನಡೆಯಿತು.

ಸಭಾಧ್ಯಕ್ಷೆ ಮೀನಾಕ್ಷಿ ಬೈರಕಟ್ಟ ಅವರು ಕಾರ್ಯಕ್ರಮ ಉದ್ಘಾಟಿಸಿದರು. ಒಕ್ಕೂಟದ ಮುಖ್ಯ ಬರಹಗಾರ್ತಿ ಶಾರದಾ ಅವರು ಹಿಂದಿನ ಸಾಲಿನ ವಾರ್ಷಿಕ ವರದಿಯನ್ನು ಸಭೆಯಲ್ಲಿ ವಾಚಿಸಿದರು.

ಸಭೆಯಲ್ಲಿ ಭಾಗವಹಿಸಿದ್ದ ವಲಯ ಮೇಲ್ವಿಚಾರಕಿ ವೀಣಾಶ್ರೀ ಅವರು ಸಂಜೀವಿನಿ ಕಾರ್ಯಕ್ರಮದ ಸಮಗ್ರ ಮಾಹಿತಿ ನೀಡಿದರು. ಬಳಿಕ ನೂತನ ಪದಾಧಿಕಾರಿಗಳ ಪದಗ್ರಹಣ ನೆರವೇರಿಸಿ ಶುಭ ಹಾರೈಸಿದರು.

ಮಹಾಸಭೆಯ ಅಂಗವಾಗಿ ಆಯೋಜಿಸಿದ್ದ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಹಾಗೂ ಅತ್ಯುತ್ತಮ ತಂಡಗಳಿಗೆ ಬಹುಮಾನ ವಿತರಿಸಲಾಯಿತು. ಒಕ್ಕೂಟದ ವತಿಯಿಂದ PMJJBY ಅಡಿಯಲ್ಲಿ ವಿಮೆ ಹೊಂದಿದ್ದ, ಮೃತಪಟ್ಟ ಸಂಜೀವಿನಿ ಸಂಘದ ಸದಸ್ಯೆಯ ಕುಟುಂಬದವರಿಗೆ ವಿಮಾ ಮೊತ್ತವನ್ನು ಬ್ಯಾಂಕ್ ಆಫ್ ಬರೋಡಾ ಅಧಿಕಾರಿ ರಮೇಶ್ ಹಸ್ತಾಂತರಿಸಿದರು.

ನಿರ್ಗಮಿತ ಪದಾಧಿಕಾರಿಗಳು, ವಲಯ ಮೇಲ್ವಿಚಾರಕರು, ಸಿಬ್ಬಂದಿ ವರ್ಗ ಹಾಗೂ ಒಕ್ಕೂಟದ ಕಾರ್ಯಚಟುವಟಿಕೆಗಳಿಗೆ ಸಹಕರಿಸಿದವರನ್ನು ಗೌರವಿಸಲಾಯಿತು.ಮಹಾಸಭೆಯ ಅಂಗವಾಗಿ ಒಕ್ಕೂಟದ ಸದಸ್ಯೆಯರು ತಯಾರಿಸಿದ ವಿವಿಧ ಉತ್ಪನ್ನಗಳ ವಿಶೇಷ ಹಳ್ಳಿ ಸಂತೆ ಆಯೋಜಿಸಲಾಗಿತ್ತು. ಸದಸ್ಯರು ತಯಾರಿಸಿದ ಉತ್ಪನ್ನಗಳನ್ನು ಸಂತೆಯಲ್ಲಿ ಮಾರಾಟಕ್ಕೆ ಇಡಲಾಗಿತ್ತು.ಸ್ವಾತಿ ಸೂರಜ್ ಪ್ರಾರ್ಥಿಸಿದರು. ಸ್ಥ

ಳೀಯ ಸಮುದಾಯ ಸಂಪನ್ಮೂಲ ವ್ಯಕ್ತಿ ಸಂಧ್ಯಾ ಸ್ವಾಗತಿಸಿದರು. ಪಶುಸಖಿ ಆಶಿಕಾ ಧನ್ಯವಾದ ಸಮರ್ಪಿಸಿದರು. ಕೃಷಿ ಸಖಿ ಸುಮಾ ಸಂಜಯ್ ಕಾರ್ಯಕ್ರಮ ನಿರೂಪಿಸಿದರು.

LEAVE A REPLY

Please enter your comment!
Please enter your name here