







ಬೆಳ್ತಂಗಡಿ: ಪಶ್ಚಿಮ ಘಟ್ಟಗಳ ಪರಿಸರ ಸೂಕ್ಷ್ಮ ಪ್ರದೇಶ ಘೋಷಣೆ ಕುರಿತು ಕೇಂದ್ರ ಪರಿಸರ ಸಚಿವಾಲಯ ಜು.27 ರಂದು ಹೊರಡಿಸಿರುವ ಕರಡು ಅಧಿಸೂಚನೆಯಲ್ಲಿ ಬೆಳ್ತಂಗಡಿ ತಾಲೂಕಿನ 16 ಗ್ರಾಮ ಪಂಚಾಯತ್ಗಳ 18 ಗ್ರಾಮಗಳು ಸೇರಿವೆ.ಇದು ಅಂತಿಮಗೊಂಡರೆ ಭೂ ಬಳಕೆ, ಕೃಷಿ, ವಸತಿ, ಕೈಗಾರಿಕೆ ಮೇಲೆ ಪರಿಣಾಮ ಬೀರಲಿದೆ.


ಈ ಬಗ್ಗೆ ಗ್ರಾಮಸ್ಥರಿಗೆ ಮಾಹಿತಿ ನೀಡಿ ಆಕ್ಷೇಪಣೆ, ಸಲಹೆ, ಅಭಿಪ್ರಾಯ ಸಂಗ್ರಹಿಸಲು ಸೆ.25ರೊಳಗೆ ವಿಶೇಷ ಗ್ರಾಮಸಭೆ ನಡೆಸುವಂತೆ ತಾಲೂಕು ಪಂಚಾಯತ್ ಕಾರ್ಯಾಲಯ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳಿಗೆ ಸೂಚಿಸಿದೆ.
ಗ್ರಾಮಸಭೆಯ ಮಾಹಿತಿಯನ್ನು ಪಂಚತಂತ್ರ 2.0ನಲ್ಲಿ ದಾಖಲಿಸಿ ಕಸ್ತೂರಿ ರಂಗನ್ ವರದಿಯ ಕರಡು ಪ್ರತಿ ಬಗ್ಗೆ ಚರ್ಚಿಸಿ, ಬಂದ ಅಭಿಪ್ರಾಯಗಳನ್ನು ನಡಾವಳಿಯಲ್ಲಿ ದಾಖಲಿಸಬೇಕು ಎಂದು ತಾಲೂಕು ಪಂಚಾಯತ್ ಕಾರ್ಯನಿರ್ವಾಹಣಾಧಿಕಾರಿ ಭವಾನಿ ಶಂಕರ್ ತಿಳಿಸಿದ್ದಾರೆ.









