ಸಚಿವ ಯು. ಟಿ. ಖಾದರ್‌ಗೆ ಕೆಡಿಪಿ ಸದಸ್ಯರಿಂದ ಮನವಿ

0

ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲಾ ಕೆಡಿಪಿ ಸದಸ್ಯರು ಜಿಲ್ಲಾ ಉಸ್ತುವಾರಿ ಸಚಿವ ಯು. ಟಿ. ಖಾದರ್ ಅವರನ್ನು ಸೆ.16ರಂದು ಭೇಟಿಯಾಗಿ ಜಿಲ್ಲೆಯ ಪ್ರಮುಖ ಸಮಸ್ಯೆ ಹಾಗೂ ಬೇಡಿಕೆಗಳ ಕುರಿತು ಮನವಿ ಸಲ್ಲಿಸಿದರು.

ಸೆ. 18ರಂದು ಮಂಗಳೂರಿನಲ್ಲಿ ನಡೆಯಲಿರುವ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಗೆ ಸಂಬಂಧಿಸಿದಂತೆ ಪ್ರಮುಖ ವಿಷಯಗಳನ್ನು ಪ್ರಸ್ತಾಪಿಸಿ ಅಗತ್ಯ ಕ್ರಮ ಕೈಗೊಳ್ಳಲು ಒತ್ತಾಯಿಸುವಂತೆ ಸಚಿವರಿಗೆ ವಿನಂತಿಸಲಾಯಿತು.ಜಿಲ್ಲೆಯಲ್ಲಿ ಸಾರ್ವಜನಿಕರಿಗೆ ತೊಂದರೆಯಾಗುತ್ತಿರುವ ಫಾರಂ 9 ಮತ್ತು 11ರ ಸಮಸ್ಯೆಗೆ ಶೀಘ್ರ ಪರಿಹಾರ ಕಲ್ಪಿಸುವುದು. ಜಿಲ್ಲೆಯಲ್ಲಿ ಗಣಿಗಾರಿಕೆಗೆ ಸಂಬಂಧಿಸಿದಂತೆ ಎದುರಾಗಿರುವ ತೊಡಕುಗಳನ್ನು ಬಗೆಹರಿಸುವುದು.

ತುಳು ಭಾಷೆಗೆ ರಾಜ್ಯದ ಅಧಿಕೃತ ಭಾಷೆಯ ಸ್ಥಾನಮಾನ ನೀಡುವ ಕುರಿತು ಸಚಿವ ಸಂಪುಟದಲ್ಲಿ ಚರ್ಚಿಸಿ ನಿರ್ಧಾರ ಕೈಗೊಳ್ಳಬೇಕು ಎಂದು ಒತ್ತಾಯಿಸಲಾಯಿತು‌.ಜಿಲ್ಲಾ ಕೆಡಿಪಿ ಸದಸ್ಯರಾದ ಮೆಲ್ವಿನ್ ಡಿಸೋಜ, ಸಂತೋಷ್ ಕುಮಾರ್ ಲಾಯಿಲ ಹಾಗೂ ಹಮೀದ್ ಕಿನ್ಯ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here