








ಬೆಳ್ತಂಗಡಿ : ಸೆಪ್ಟೆಂಬರ್ 18 ರಂದು ಮಂಗಳೂರಿನ ಪ್ರಜಾ ಸೌಧ ಸಭಾಂಗಣದಲ್ಲಿ ಕರ್ನಾಟಕ ಸರಕಾರದ ಮುಖ್ಯಮಂತ್ರಿಗಳಾದ ಮಾನ್ಯ ಡಿ.ಕೆ.ಶಿವಕುಮಾರ್ ಅಧ್ಯಕ್ಷತೆಯಲ್ಲಿ ಸಚಿವ ಸಂಪುಟ ಸಭೆ ನಡೆಯಲಿದ್ದು, ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ 48 ಗ್ರಾಮ ಪಂಚಾಯತ್ ಗಳ ಮೂಲಭೂತ ಸೌಕರ್ಯಗಳಿಗೆ, ಗ್ರಾಮಗಳ ಅಭಿವೃದ್ದಿಗಾಗಿ ತಲಾ 10 ಕೋಟಿ ರೂಪಾಯಿ ಅನುದಾನವನ್ನು ಸಚಿವ ಸಂಪುಟ ಸಭೆಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸುವಂತೆ ಕರ್ನಾಟಕ ಸರಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ, ಖಾದರ್ ರವರಿಗೆಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಅಲ್ಪಸಂಖ್ಯಾತ ನಗರ ಘಟಕದ ಅಧ್ಯಕ್ಷ ಅಬ್ದುಲ್ ಕರೀಮ್ ಗೇರುಕಟ್ಟೆ ಮನವಿ ಸಲ್ಲಿಸಿದ್ದಾರೆ.









