






ಬೆಳ್ತಂಗಡಿ: ತಾಲೂಕಿನ ವಿವಿಧೆಡೆ ನಡೆದ ವಿಶ್ವಕರ್ಮ ಪೂಜೆ ಹಾಗೂ ವಿಶ್ವಕರ್ಮ ಯಜ್ಞ ಕಾರ್ಯಕ್ರಮಗಳಲ್ಲಿ ಶಾಸಕರಾದ ಶ್ರೀ ಹರೀಶ್ ಪೂಂಜಾ ಅವರು ಭಾಗವಹಿಸಿ ಭಕ್ತಿಪೂರ್ವಕವಾಗಿ ಪ್ರಾರ್ಥನೆ ಸಲ್ಲಿಸಿದರು.ವಿ
ಶ್ವಕರ್ಮಾಭ್ಯುದಯ ಸಭಾ ಲಾಯಿಲ, ವಿಶ್ವಕರ್ಮ ಬ್ರಾಹ್ಮಣ ಸಮಾಜ ಸೇವಾ ಸಂಘ ಮಡಂತ್ಯಾರು ಹಾಗೂ ನಾರಾವಿ ಇವರ ಜಂಟಿ ವತಿಯಿಂದ ಈ ಧಾರ್ಮಿಕ ಕಾರ್ಯಕ್ರಮಗಳು ಜರುಗಿದವು.


ಈ ವಿಶೇಷ ಪೂಜೆಯಲ್ಲಿ ಪಾಲ್ಗೊಂಡ ಶಾಸಕರು, ಸಮುದಾಯದ ಪ್ರಮುಖರೊಂದಿಗೆ ಬೆರೆತು ಶುಭ ಹಾರೈಸಿದರು.
ಕಾರ್ಯಕ್ರಮದಲ್ಲಿ ಸ್ಥಳೀಯ ಗಣ್ಯರು, ಸಮುದಾಯದ ಮುಖಂಡರು ಮತ್ತು ವಿವಿಧ ಸಂಘಟನೆಗಳ ಪದಾಧಿಕಾರಿಗಳು ಉಪಸ್ಥಿತರಿದ್ದು ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಿದರು.









