ಹೊರಗುತ್ತಿಗೆ ಪೌರನೀರು ಸರಬರಾಜು ನೌಕರರನ್ನು ವಿಶೇಷ ನೇರ ನೇಮಕಾತಿ/ನೇರಪಾವತಿ ಮಾಡಲು ಆಗ್ರಹಿಸಿ ಬೃಹತ್ ಪಾದಯಾತ್ರೆ ಹಿನ್ನೆಲೆ: ಸೆ.21 ರಂದು ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿ ನೀರು ಸರಬರಾಜು ಸ್ಥಗಿತಗೊಳ್ಳುವ ಸಾಧ್ಯತೆ: ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿ ಹಾಗೂ ತಹಶೀಲ್ದಾರ್ ಗೆ ಮನವಿ

0

ಬೆಳ್ತಂಗಡಿ : ರಾಜ್ಯದ ಮಹಾನಗರ ಪಾಲಿಕೆ ಮತ್ತು ನಗರ ಸ್ಥಳೀಯ ಸಂಸ್ಥೆಗಳಲ್ಲಿ ಸೇವೆ ಸಲ್ಲಿಸುತ್ತಿರುವ ಹೊರಗುತ್ತಿಗೆ ಪೌರನೀರು ಸರಬರಾಜು ನೌಕರರನ್ನು ಪೌರಕಾರ್ಮಿಕರ ಮಾದರಿಯಲ್ಲಿ ವಿಶೇಷ ನೇರ ನೇಮಕಾತಿ/ನೇರಪಾವತಿ ಮಾಡಲು ಆಗ್ರಹಿಸಿ ಸೆ.21ರಿಂದ ತುಮಕೂರಿನ ಸಿದ್ದಗಂಗಾ ಮಠದಿಂದ ಬೆಂಗಳೂರಿನ ಮಾನ್ಯ ಮುಖ್ಯ ಮಂತ್ರಿಗಳ ಮನೆಯವರೆಗೆ ಬೃಹತ್ ಮಟ್ಟದ ಪಾದಯಾತ್ರೆ ಹಮ್ಮಿಕೊಂಡಿದ್ದು ಈ ಬಗ್ಗೆ ಬೆಳ್ತಂಗಡಿ ಪಟ್ಟಣ ಪಂಚಾಯತ್ ನ ಹೊರಗುತ್ತಿಗೆ ನೀರು ಸರಬರಾಜು ಸಹಾಯಕರು ಪಾಲ್ಗೊಳ್ಳುವುದರಿಂದ ನೀರು ಸರಬರಾಜು ಸ್ಥಗಿತಗೊಳ್ಳುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ.

ಈ ಕುರಿತಾಗಿ ಬೆಳ್ತಂಗಡಿ ಪಟ್ಟಣ ಪಂಚಾಯತ್ ನ ಹೊರಗುತ್ತಿಗೆ ನೀರು ಸರಬರಾಜು ನೌಕರರು ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿಗೆ ಹಾಗೂ ತಹಶೀಲ್ದಾರ್ ಗೆ ಪಾದಯಾತ್ರೆಯಲ್ಲಿ ಪಾಲ್ಗೊಳ್ಳಲು ಅನುಮತಿ ನೀಡಬೇಕೆಂದು ಮನವಿ ಮಾಡಿಕೊಂಡಿದ್ದಾರೆ.

LEAVE A REPLY

Please enter your comment!
Please enter your name here