







ಬೆಳ್ತಂಗಡಿ : ಸೆ.19ರಂದು ಪದುವ ಹೈಸ್ಕೂಲ್, ನಂತೂರು, ಮಂಗಳೂರಿನಲ್ಲಿ ನಡೆದ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಪ್ರೌಢ ಶಾಲಾ ವಿಭಾಗದ ಬಾಲಕರ ವಾಲಿಬಾಲ್ ಪಂದ್ಯಾಟದಲ್ಲಿ ವಾಣಿ ಆಂಗ್ಲ ಮಾಧ್ಯಮ ಶಾಲೆಯ ಬಾಲಕರ ತಂಡವು ದ್ವಿತೀಯ ಸ್ಥಾನ ಪಡೆದು ಹೆಮ್ಮೆಯ ಸಾಧನೆ ಮಾಡಿದೆ.



ಈ ಪಂದ್ಯಾಟದಲ್ಲಿ ಅತ್ಯುತ್ತಮ ಪ್ರತಿಭೆ ಪ್ರದರ್ಶಿಸಿದ ಸಂಸ್ಥೆಯ 10ನೇ ತರಗತಿಯ ವಿದ್ಯಾರ್ಥಿಗಳಾದ ಮಾ. ಶ್ರೇಯಸ್ ಎಸ್, ಮಾ. ಮೌಕ್ಷಿತ್ ಬಿ ಎಸ್ ಹಾಗೂ ಮಾ. ಪ್ರತುಲ್ ಕೆ. ಎಸ್ ಅವರುಗಳು ಉನ್ನತ ಮಟ್ಟದ ವಿಭಾಗ ಮಟ್ಟಕ್ಕೆ ಆಯ್ಕೆಯಾಗಿ ಶಾಲೆಯ ಕೀರ್ತಿಯನ್ನು ಹೆಚ್ಚಿಸಿದ್ದಾರೆ.









