ತಾಲೂಕು ಮಟ್ಟದ ಫುಟ್ಬಾಲ್‌ನಲ್ಲಿ ಬೆಳ್ತಂಗಡಿ ಎಸ್.ಡಿ.ಎಂ. ಆಂಗ್ಲ ಮಾಧ್ಯಮ ಶಾಲೆಗೆ ಸತತ ಎರಡನೇ ಬಾರಿ ಚಾಂಪಿಯನ್ ಪಟ್ಟ

0

ಉಜಿರೆ: ಎಸ್.ಡಿ.ಎಂ. ಸೆಕೆಂಡರಿ ಶಾಲೆ, ಉಜಿರೆ ಇವರ ನೇತೃತ್ವದಲ್ಲಿ ಉಜಿರೆಯ ಶ್ರೀ. ಡಿ .ರತ್ನವರ್ಮ ಹೆಗ್ಗಡೆ ಕ್ರೀಡಾಂಗಣದಲ್ಲಿ ನಡೆದ ಬೆಳ್ತಂಗಡಿ ತಾಲೂಕು ಮಟ್ಟದ ಫುಟ್ಬಾಲ್ ಪಂದ್ಯಾಟದ ಪ್ರಾಥಮಿಕ ವಿಭಾಗದಲ್ಲಿ ಬೆಳ್ತಂಗಡಿ ಎಸ್.ಡಿ.ಎಂ. ಆಂಗ್ಲ ಮಾಧ್ಯಮ ಶಾಲೆಯ ತಂಡವು ಸತತ ಎರಡನೇ ಬಾರಿ ಚಾಂಪಿಯನ್ ಆಗಿ ಹೊರಹೊಮ್ಮಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದೆ.

ಪಂದ್ಯಾವಳಿಯಲ್ಲಿ ಅತ್ಯುತ್ತಮ ಕ್ರೀಡಾ ಕೌಶಲ್ಯ, ಶಿಸ್ತುಬದ್ಧ ಆಟ ಹಾಗೂ ಸಂಘಟಿತ ತಂಡದ ಪ್ರಯತ್ನವನ್ನು ಪ್ರದರ್ಶಿಸಿದ ಎಸ್.ಡಿ.ಎಂ. ತಂಡವು ಮತ್ತೊಮ್ಮೆ ತಾಲೂಕು ಮಟ್ಟದಲ್ಲಿ ತನ್ನ ಮೇಲುಗೈ ಸಾಧಿಸಿದೆ. ಸತತ ಎರಡನೇ ಬಾರಿಗೆ ಚಾಂಪಿಯನ್ ಪಟ್ಟ ಅಲಂಕರಿಸಿರುವುದು ಶಾಲೆಯ ಕ್ರೀಡಾ ಸಾಧನೆಗೆ ಮತ್ತೊಂದು ಗರಿಮೆ ತಂದಿದೆ.

ತಂಡಕ್ಕೆ ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕರಾದ ಪ್ರವೀಣ್ ಎನ್. ಅವರು ಸೂಕ್ತ ತರಬೇತಿ ಹಾಗೂ ಮಾರ್ಗದರ್ಶನ ನೀಡಿದ್ದು, ವಿದ್ಯಾರ್ಥಿಗಳ ಗೆಲುವಿನಲ್ಲಿ ಮಹತ್ವದ ಪಾತ್ರ ವಹಿಸಿದ್ದಾರೆ.ತಂಡದ ಈ ಗಮನಾರ್ಹ ಸಾಧನೆಗೆ ಶಾಲೆಯ ಮುಖ್ಯೋಪಾಧ್ಯಾಯಿನಿ ಹೇಮಲತಾ ಎಂ. ಆರ್. ಹಾಗೂ ಶಿಕ್ಷಕ ವೃಂದ ಅಭಿನಂದನೆ ಸಲ್ಲಿಸಿ, ಜಿಲ್ಲಾ ಮಟ್ಟದ ಪಂದ್ಯಾವಳಿಯಲ್ಲಿಯೂ ಉತ್ತಮ ಪ್ರದರ್ಶನ ನೀಡಿ ಶಾಲೆಗೆ ಕೀರ್ತಿ ತರಲಿ ಎಂದು ಶುಭ ಹಾರೈಸಿದ್ದಾರೆ.

LEAVE A REPLY

Please enter your comment!
Please enter your name here