






ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಬೆಳ್ತಂಗಡಿ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಬೆಳ್ತಂಗಡಿ ಇದರ ವತಿಯಿಂದ ಶ್ರೀ ಧರ್ಮಸ್ಥಳ ಅನುದಾನಿತ ಪ್ರೌಢಶಾಲೆ, ಉಜಿರೆ ಇಲ್ಲಿ ನಡೆದ 2026_27 ನೇ ಶೈಕ್ಷಣಿಕ ವರ್ಷದ ತಾಲೂಕು ಮಟ್ಟದ ಪ್ರಾಥಮಿಕ/ಪ್ರೌಢಶಾಲಾ ವಿಭಾಗದ ಬಾಲಕ/ಬಾಲಕಿಯರ ಫುಟ್ಬಾಲ್ ಪಂದ್ಯಾಟದಲ್ಲಿ ದಿವ್ಯಜೋತಿ ಆಂಗ್ಲ ಮಾಧ್ಯಮ ಶಾಲೆ ಕಾಯರ್ತಡ್ಕ ಇಲ್ಲಿನ ವಿದ್ಯಾರ್ಥಿಗಳು ಬಾಲಕಿಯರ ಪ್ರಾಥಮಿಕ ಹಾಗೂ ಪ್ರೌಢಶಾಲೆ ಎರಡು ವಿಭಾಗಗಳಲ್ಲಿಯೂ ಪ್ರಥಮ ಸ್ಥಾನವನ್ನು ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.


ಇವರಿಗೆ ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕ ಮಹೀನ್ ಇವರು ತರಬೇತಿ ನೀಡಿರುತ್ತಾರೆ. ಜಿಲ್ಲಾ ಮಟ್ಟಕ್ಕೆ ಆಯ್ಕೆಯಾದ ಎಲ್ಲ ವಿದ್ಯಾರ್ಥಿಗಳಿಗೆ ಹಾಗೂ ತರಬೇತುದಾರರಿಗೆ ಶಾಲಾ ಮುಖ್ಯ ಶಿಕ್ಷಕಿ ಸಿಸ್ಟರ್ ಲಿಸ್ನಾ ಮ್ಯಾಥ್ಯೂ ಅಭಿನಂದಿಸಿ ಜಿಲ್ಲಾ ಮಟ್ಟಕ್ಕೆ ಶುಭ ಹಾರೈಸಿರುತ್ತಾರೆ .









