






ಬೆಳ್ತಂಗಡಿ: ರಾಜ್ಯದ ಮಹಾನಗರ ಪಾಲಿಕೆ ಮತ್ತು ನಗರ ಸ್ಥಳೀಯ ಸಂಸ್ಥೆಗಳಲ್ಲಿ ಸೇವೆ ಸಲ್ಲಿಸುತ್ತಿರುವ ಹೊರಗುತ್ತಿಗೆ ಪೌರನೀರು ಸರಬರಾಜು ನೌಕರರನ್ನು ಪೌರಕಾರ್ಮಿಕರ ಮಾದರಿಯಲ್ಲಿ ವಿಶೇಷ ನೇರ ನೇಮಕಾತಿ / ನೇರ ಪಾವತಿ ಮಾಡಲು ಆಗ್ರಹಿಸಿ ಸೆ. 21 ರಿಂದ ತುಮಕೂರಿನ ಸಿದ್ದಗಂಗಾ ಮಠದಿಂದ ಬೆಂಗಳೂರಿನ ಮುಖ್ಯಮಂತ್ರಿಗಳ ನಿವಾಸದವರೆಗೆ ಬೃಹತ್ ಪಾದಯಾತ್ರೆ ನಡೆಯುತ್ತಿದೆ.


ಪ್ರತಿಭಟನೆ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ನೀರು ಸರಬರಾಜು ಸ್ಥಗಿತಗೊಂಡಿದ್ದು, ಬೇಡಿಕೆ ಈಡೇರುವವರೆಗೂ ಪ್ರತಿಭಟನೆ ಮುಂದುವರಿಯುವ ಸಾಧ್ಯತೆಯಿದೆ.ಈ ಪ್ರತಿಭಟನಾ ಪಾದಯಾತ್ರೆಯಲ್ಲಿ ಬೆಳ್ತಂಗಡಿ ಪಟ್ಟಣ ಪಂಚಾಯತ್‌ನ ಹೊರಗುತ್ತಿಗೆ ನೀರು ಸರಬರಾಜು ಸಹಾಯಕರು ಪಾಲ್ಗೊಂಡಿದ್ದಾರೆ.









