ರಸ್ತೆ ಅಪಘಾತದಲ್ಲಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಮಾಜಿ ಸಚಿವ ಬಿ.ರಮಾನಾಥ ರೈರವರನ್ನು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಭೇಟಿ

0

ರಸ್ತೆ ಅಪಘಾತದಲ್ಲಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಮಾಜಿ ಸಚಿವ , ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ಬಿ.ರಮಾನಾಥ ರೈರವರನ್ನು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ರವರು ಭೇಟಿ ನೀಡಿ ಆರೋಗ್ಯ ವಿಚಾರಿಸಿದರು.

ಕಾರ್ಕಳ ಸಮೀಪದ ಸಾಣೂರಿನಲ್ಲಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಗಾಯಗೊಂಡು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಮಾಜಿ ಸಚಿವ ರಮಾನಾಥ ರೈ ಹಾಗೂ ಅವರ ಜೊತೆಗಿದ್ದ ಆಪ್ತ ಸಹಾಯಕ , ಚಾಲಕರನ್ನು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ರವರು ಭೇಟಿಯಾಗಿ ಆರೋಗ್ಯ ವಿಚಾರಿಸಿದರು.

ಮಾಜಿ ಸಚಿವ ರೈರವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದರೂ ವೈದ್ಯರ ಸೂಚನೆಯಂತೆ ಒಂದೆರಡು ದಿನ ವಿಶ್ರಾಂತಿ ಪಡೆಯುವುದು ಅನಿವಾರ್ಯವಾಗಿದೆ. ಆಪ್ತ ಸಹಾಯಕ ಹಾಗೂ ಚಾಲಕರಿಗೆ ಗಾಯಗಳಾಗಿದ್ದರೂ ಪ್ರಾಣಾಪಾಯದಿಂದ ಪಾರಾಗಿದ್ದು , ಚಿಕಿತ್ಸೆ ನಡೆಯುತ್ತಿದೆ.

ಪಕ್ಷದ ಕಾರ್ಯಕರ್ತರು ಯಾರು ಭಯ ಪಡುವ ಅಗತ್ಯವಿಲ್ಲ ಮತ್ತು ಒಂದೆರಡು ದಿನಗಳಲ್ಲಿ ಆಸ್ಪತ್ರೆಯಿಂದ ಬಿಡುಗಡೆಯಾದ ಬಳಿಕ ಭೇಟಿಯಾದರೆ ಉತ್ತಮ ಎಂದು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here