







ಕುಂಭಶ್ರೀ ಆಂಗ್ಲ ಮಾಧ್ಯಮ ಶಾಲಾ ಕಾಲೇಜು, ನಿಟ್ಟಡೆ–ವೇಣೂರು ಇಲ್ಲಿನ 9ನೇ ತರಗತಿಯ ಸಾನ್ವಿ ಕಾರ್ಕಳದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದ ಉಭಯ ಜಿಲ್ಲಾ ಮಟ್ಟದ ಚಿತ್ರಕಲಾ ಸ್ಪರ್ಧೆಯಲ್ಲಿ ತೃತೀಯ ಸ್ಥಾನ ಪಡೆದು ಶಾಲೆಗೆ ಕೀರ್ತಿ ತಂದಿದ್ದಾರೆ.


ಸಾನ್ವಿ ಅವರ ಈ ಸಾಧನೆಗೆ ಸಂಸ್ಥೆಯ ಸಂಸ್ಥಾಪಕ ಗಿರೀಶ್ ಕೆ.ಎಚ್, ಸಂಚಾಲಕ ಅಶ್ವಿತ್ ಕುಲಾಲ್ ಹಾಗೂ ಎಲ್ಲಾ ಶಿಕ್ಷಕ-ಶಿಕ್ಷಕೇತರ ವೃಂದದವರು ಅಭಿನಂದನೆ ಸಲ್ಲಿಸಿ, ಮುಂದಿನ ದಿನಗಳಲ್ಲಿಯೂ ಇನ್ನಷ್ಟು ಯಶಸ್ಸು ದೊರೆಯಲಿ ಎಂದು ಶುಭ ಹಾರೈಸಿದರು.
ಈ ಸಾಧನೆಗೆ ಮಾರ್ಗದರ್ಶನ ಹಾಗೂ ಸಹಕಾರ ನೀಡಿದ ಕುಂಭಶ್ರೀ ಶಾಲೆಯ ಚಿತ್ರಕಲಾ ಶಿಕ್ಷಕಿ ಯಕ್ಷಿಣಿ ಅವರಿಗೂ ಸಂಸ್ಥೆಯ ವತಿಯಿಂದ ಹೃತ್ಪೂರ್ವಕ ಅಭಿನಂದನೆಗಳನ್ನು ಸಲ್ಲಿಸಲಾಯಿತು.









