






ಬೆಳ್ತಂಗಡಿ: 72ನೇ ವನ್ಯಜೀವಿ ಸಪ್ತಾಹವನ್ನು ಸೆ.21ರಂದು ಶ್ರೀ ಗುರುದೇವ ಪದವಿ ಪೂರ್ವ ಕಾಲೇಜಿನಲ್ಲಿ ಆಚರಿಸಲಾಯಿತು.ವನ್ಯಜೀವಿ ವಲಯ ಅರಣ್ಯಾಧಿಕಾರಿ ಶರ್ಮಿಷ್ಟ ಅವರು ಕಾರ್ಯಕ್ರಮ ಉದ್ಘಾಟಿಸಿ ಶುಭ ಹಾರೈಸಿದರು.


ಗುರುದೇವ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಸುಕೇಶ್ ಕುಮಾರ್ ಕೆ. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮವನ್ನು ಒಂದರಿAದ ಪಿಯುಸಿ ತರಗತಿವರೆಗಿನ ವಿದ್ಯಾರ್ಥಿಗಳಿಗೆ ಚಿತ್ರಕಲೆ ಸ್ಪರ್ಧೆ, ರಸಪ್ರಶ್ನೆ ಸ್ಪರ್ಧೆ ಪ್ರಬಂಧ ಸ್ಪರ್ಧೆ ಭಾಷಣ ಸ್ಪರ್ಧೆ, ಚಿತ್ರ ನೋಡಿ ಪ್ರಾಣಿ ಅಥವಾ ಮರ ಗುರುತಿಸುವಿಕೆಯ ಸ್ಪರ್ಧೆ ಸೇರಿದಂತೆ ಒಟ್ಟು ಎಂಟು ಸ್ಪರ್ಧೆಗಳನ್ನು ಏರ್ಪಡಿಸಿ ಅರ್ಥಪೂರ್ಣವಾಗಿ ಆಚರಿಸಲಾಯಿತು.ಕಾಲೇಜಿನ ಉಪ ಪ್ರಾಂಶುಪಾಲ ಬಿಎ ಶಮಿವುಲ್ಲಾ ಸ್ವಾಗತಿಸಿ, ರಸಾಯನಶಾಸ್ತ್ರ ಉಪನ್ಯಾಸಕಿ ಸೌಜನ್ಯ ಅವರು ಕಾರ್ಯಕ್ರಮ ನಿರೂಪಿಸಿದರು.
ಕಾರ್ಯಕ್ರಮದಲ್ಲಿ ಶ್ರೀ ಗುರುದೇವ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲೆ ಡಾ. ಸವಿತಾ, ಬೆಳ್ತಂಗಡಿ ಉಪ ವಲಯರಣ್ಯಾಧಿಕಾರಿ ರವೀಂದ್ರ, ಅಳದಂಗಡಿ ಉಪ ವಲಯ ಅರಣ್ಯಾಧಿಕಾರಿ ಭರತ್, ಮಿತ್ತಬಾಗಿಲಿನ ಉಪವಲಯ ಅರಣ್ಯಾಧಿಕಾರಿ ಮ್ಯಾಥ್ಯೂ ಉಪಸ್ಥಿತರಿದ್ದರು.









