






ಗುರುವಾಯನಕೆರೆ: ರಾಷ್ಟ್ರೀಯ ಸ್ವಯಂಸೇವಕ ಸಂಘದ ಹಿರಿಯ ಕಾರ್ಯಕರ್ತ ಹಾಗೂ ಬಿಜೆಪಿ ಸಕ್ರಿಯ ಕಾರ್ಯಕರ್ತ, ಪಕ್ಷದ ಸಂಘಟನಾ ಕಾರ್ಯದಲ್ಲಿ ಹಲವು ವರ್ಷಗಳಿಂದ ತೊಡಗಿಸಿಕೊಂಡಿದ್ದ ಗುರುವಾಯನಕೆರೆಯ ಶ್ರೀ ಗಂಗಯ್ಯ ಬಂಗೇರ ಪಿಲಿಕುಂಜ (80) ಅವರು ಸೆ. 25ರಂದು ಬೆಳಿಗ್ಗೆ ಹಠಾತ್ ಹೃದಯಾಘಾತದಿಂದ ನಿಧನರಾದರು.
ಪಕ್ಷದ ಕಾರ್ಯಚಟುವಟಿಕೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದ ಅವರು, ಸಂಘದ ವಿವಿಧ ಕಾರ್ಯಗಳಲ್ಲಿ ಕೂಡ ತಮ್ಮನ್ನು ತೊಡಗಿಸಿಕೊಂಡಿದ್ದರು. ಸರಳ ಸ್ವಭಾವದವರಾಗಿದ್ದ ಅವರು ಸ್ಥಳೀಯವಾಗಿ ಪಕ್ಷ ಹಾಗೂ ಸಂಘದ ಕಾರ್ಯಕರ್ತರೊಂದಿಗೆ ಆತ್ಮೀಯ ಒಡನಾಟ ಹೊಂದಿದ್ದರು.


ನಿನ್ನೆ ಇಡೀ ದಿನ ಯಾವುದೇ ಅಸ್ವಸ್ಥತೆಯ ಲಕ್ಷಣವಿಲ್ಲದೆ ಆರಾಮವಾಗಿದ್ದ ಗಂಗಯ್ಯ ಬಂಗೇರ ಅವರು ಕರ್ನಾಟಕ ವಿಧಾನಸಭೆಯ ಅಧಿವೇಶನದ ಕಲಾಪವನ್ನು ಇಡೀ ದಿನ ಕುಳಿತು ವೀಕ್ಷಿಸಿದ್ದರು ಎನ್ನಲಾಗಿದೆ. ಆದರೆ ಇಂದು ಬೆಳಗ್ಗೆ ಹಠಾತ್ ಹೃದಯಾಘಾತಕ್ಕೊಳಗಾಗಿ ನಿಧನರಾಗಿದ್ದಾರೆ.
ಮೃತರು ಪತ್ನಿ, ಮೂವರು ಗಂಡು ಮಕ್ಕಳು ಹಾಗೂ ಇಬ್ಬರು ಹೆಣ್ಣು ಮಕ್ಕಳನ್ನು ಮೊಮ್ಮಕ್ಕಳನ್ನು ಅಗಲಿದ್ದಾರೆ. ಅವರ ನಿಧನಕ್ಕೆ ಬಿಜೆಪಿ ಮುಖಂಡರು, ಆರ್ಎಸ್ಎಸ್ ಕಾರ್ಯಕರ್ತರು, ವಿವಿಧ ಸಂಘ-ಸಂಸ್ಥೆಗಳ ಪ್ರಮುಖರು ಹಾಗೂ ಸ್ಥಳೀಯರು ಸಂತಾಪ ವ್ಯಕ್ತಪಡಿಸಿದ್ದಾರೆ.









