ಬೆಳ್ತಂಗಡಿ ತಾಲೂಕು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದಿಂದ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ

0

ಬೆಳ್ತಂಗಡಿ : 2026ರ ಮಾರ್ಚ್/ಎಪ್ರಿಲ್ ತಿಂಗಳಲ್ಲಿ ನಡೆದ ಎಸ್.ಎಸ್.ಎಲ್.ಸಿ ಹಾಗೂ ದ್ವಿತೀಯ ಪಿ.ಯು.ಸಿ ವಾರ್ಷಿಕ ಪರೀಕ್ಷೆಯಲ್ಲಿ ಶೇ.90 ಹಾಗೂ ಅದಕ್ಕಿಂತ ಹೆಚ್ಚು ಅಂಕಗಳನ್ನು ಪಡೆದ ಬೆಳ್ತಂಗಡಿ ತಾಲೂಕಿನ ಗೌಡರ ಯಾನೆ ಒಕ್ಕಲಿಗರ ಸಮಾಜದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಸಮಾರಂಭವನ್ನು ಅ.18 ರಂದು ತಾಲೂಕಿನ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ಸಭಾಭವನದಲ್ಲಿ ಹಮ್ಮಿಕೊಳ್ಳಲಾಗಿದೆ.

ಸಂಬಂಧಪಟ್ಟ ವಿದ್ಯಾರ್ಥಿಗಳು ವಾಣಿ ಶಿಕ್ಷಣ ಸಂಸ್ಥೆಯ ಕಛೇರಿಯಿಂದ ಅರ್ಜಿಗಳನ್ನು ಪಡೆದುಕೊಂಡು, ಗ್ರಾಮ ಸಮಿತಿ ಅಧ್ಯಕ್ಷರು ಅಥವಾ ಕಾರ್ಯದರ್ಶಿಯವರಿಂದ ದೃಢೀಕರಿಸಿ ದಾಖಲೆಗಳೊಂದಿಗೆ ಅ.10 ರ ಶನಿವಾರದೊಳಗೆ ವಾಣಿ ಶಿಕ್ಷಣ ಸಂಸ್ಥೆಯ ಕಛೇರಿಯಲ್ಲಿ ಸ ಲ್ಲಿಸಲು ಕೋರಲಾಗಿದೆ. ಅಲ್ಲದೆ ಸಾಂಸ್ಕೃತಿಕ/ಆಟೋಟ ಸ್ಪರ್ಧೆಗಳಲ್ಲಿ (ಸರ್ಕಾರಿ ಇಲಾಖೆಗಳ ವತಿಯಿಂದ ನಡೆದ ಸ್ಪರ್ಧೆಗಳಲ್ಲಿ ಭಾಗವಹಿಸಿ ವಿಜೇತರಾದವರು) ಜಿಲ್ಲಾ ಮಟ್ಟದಲ್ಲಿ ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾದ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು. ಅ.12 ರ ಸೋಮವಾರದ ನಂತರ ಬಂದ ಅರ್ಜಿಗಳನ್ನು ಯಾವುದೇ ಕಾರಣಕ್ಕೂ ಪರಿಗಣಿಸಲಾಗುವುದಿಲ್ಲ

LEAVE A REPLY

Please enter your comment!
Please enter your name here