ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲದ ವತಿಯಿಂದ ಪಂಡಿತ್ ದೀನ್ ದಯಾಳ್ ಉಪಧ್ಯಾಯ ಇವರ ಜನ್ಮ ದಿನಾಚರಣೆ

0

ಬಿಜೆಪಿ ಬೆಳ್ತಂಗಡಿ ಮಂಡಲ ವತಿಯಿಂದ ಪಂಡಿತ್ ದೀನ್ ದಯಾಳ್ ಉಪದ್ಯಾಯ ಇವರ ಜನ್ಮದಿನಾಚರಣೆಯನ್ನು ದೀಪ ಬೆಳಗಿಸುವ ಮೂಲಕ ಬೆಳ್ತಂಗಡಿ ಬಿಜೆಪಿ ಕಚೇರಿಯಲ್ಲಿ ಕಾರ್ಯಕರ್ತರು ಆಚರಿಸಿದರು.

ಲಾಯಿಲ ಮಹಾ ಶಕ್ತಿ ಕೇಂದ್ರ ಪ್ರಧಾನ ಕಾರ್ಯದರ್ಶಿ ಬಿಜೆಪಿ ಗೀತೆಯನ್ನು ಹಾಡಿದರು, ಜಿಲ್ಲೆಯ ಮನ್ ಕೀ ಬಾತ್ ಸಂಯೋಜಕರು ಸೀತಾರಾಮ್ ಬೆಳಾಲು ದಿನ್ ದಯಾಳ್ ರವರ ಜೀವನ ಚರಿತ್ರೆಯನ್ನು ವಿವರಿಸಿದರು.

ಮಂಡಲ ಪ್ರಧಾನ ಕಾರ್ಯದರ್ಶಿ ಜಯಾನಂದ ಗೌಡ, ನಗರ ಮಹಾಶಕ್ತಿ ಕೇಂದ್ರ ಅಧ್ಯಕ್ಷ ರಾಜೇಶ್ ಪ್ರಭು, ಪ್ರಧಾನ ಕಾರ್ಯದರ್ಶಿ ಶರತ್ ಶೆಟ್ಟಿ, ಯುವ ಮೋರ್ಚಾ ಉಪಾಧ್ಯಕ್ಷ ಗಣೇಶ್ ಲಾಯಿಲ, ಶಕ್ತಿ ಕೇಂದ್ರ ಪ್ರಮುಖ್ ಪ್ರಕಾಶ್ ಆಚಾರ್ಯ, ವಿಶ್ವನಾಥ್, ಕವಿತಾ,ಮಹಾ ಶಕ್ತಿ ಕೇಂದ್ರ ಪ್ರಧಾನ ಕಾರ್ಯದರ್ಶಿ ಅರವಿಂದ್ ಲಾಯಿಲ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here