ಯುವ ಸಂಸತ್ ಸ್ಪರ್ಧೆ: ಎಸ್‌ಡಿಎಂ) ಪ್ರೌಢಶಾಲೆ ವಿದ್ಯಾರ್ಥಿನಿ ಸೃಜನ್ಯ ಪ್ರಥಮ ಸ್ಥಾನ ಗಳಿಸಿ ಜಿಲ್ಲಾ ಮಟ್ಟದ ಸ್ಪರ್ಧೆಗೆ ಆಯ್ಕೆ

0

ಬೆಳಾಲು: ಸರ್ಕಾರಿ ಪ್ರೌಢಶಾಲೆ ಕಲ್ಮಂಜದಲ್ಲಿ ಇತ್ತೀಚೆಗೆ ಆಯೋಜಿಸಲಾಗಿದ್ದ ಬೆಳ್ತಂಗಡಿ ತಾಲೂಕು ಮಟ್ಟದ ಪ್ರೌಢಶಾಲಾ ವಿಭಾಗದ ಯುವ ಸಂಸತ್ ಸ್ಪರ್ಧೆಯಲ್ಲಿ ಬೆಳಾಲಿನ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ (ಎಸ್‌ಡಿಎಂ) ಪ್ರೌಢಶಾಲೆಯ 10ನೇ ತರಗತಿ ವಿದ್ಯಾರ್ಥಿನಿ ಸೃಜನ್ಯ ಪ್ರಥಮ ಸ್ಥಾನ ಗಳಿಸಿ ಜಿಲ್ಲಾ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ.

ಸಂಸದೀಯ ಮೌಲ್ಯಗಳು, ಪ್ರಜಾಸತ್ತಾತ್ಮಕ ಚಿಂತನೆಗಳು ಹಾಗೂ ಜಾಗೃತ ನಾಯಕತ್ವದ ಕುರಿತು ವಿದ್ಯಾರ್ಥಿಗಳಲ್ಲಿ ಅರಿವು ಮೂಡಿಸುವ ಉದ್ದೇಶದಿಂದ ಈ ಸ್ಪರ್ಧೆಯನ್ನು ಆಯೋಜಿಸಲಾಗಿತ್ತು.

ಸ್ಪರ್ಧೆಯಲ್ಲಿ ಅತ್ಯುತ್ತಮ ವಾಗ್ದರಿ ಹಾಗೂ ನಿರೂಪಣೆ ತೋರಿದ ಸೃಜನ್ಯ, ಜಿಲ್ಲಾ ಮಟ್ಟದ ಸ್ಪರ್ಧೆಯಲ್ಲಿ ತಾಲೂಕನ್ನು ಹಾಗೂ ತಮ್ಮ ಶಾಲೆಯನ್ನು ಪ್ರತಿನಿಧಿಸಲಿದ್ದಾರೆ. ವಿದ್ಯಾರ್ಥಿನಿಯ ಈ ಸಾಧನೆಗೆ ಶಾಲೆಯ ಆಡಳಿತ ಮಂಡಳಿ, ಮುಖ್ಯೋಪಾಧ್ಯಾಯರು, ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ ವರ್ಗದವರು ಮತ್ತು ವಿದ್ಯಾರ್ಥಿಗಳು ಅಭಿನಂದಿಸಿ, ಜಿಲ್ಲಾ ಮಟ್ಟದ ಸ್ಪರ್ಧೆಗೆ ಶುಭ ಹಾರೈಸಿದ್ದಾರೆ.

LEAVE A REPLY

Please enter your comment!
Please enter your name here