ಬೆಳ್ತಂಗಡಿ ಚೇಂಬರ್ ಆಫ್ ಕಾಮರ್ಸ್ & ಇಂಡಸ್ಟ್ರೀಸ್ ನೂತನ ಅಧ್ಯಕ್ಷರಾಗಿ ಶಶಿಧರ ಪೈಕಾರ್ಯದರ್ಶಿ ಚಿದಾನಂದ ಇಡ್ಯಾ, ಕೋಶಾಧಿಕಾರಿ‌ ವಿಲ್ಸನ್ ಗೊನ್ಸಾಲ್ವಿಸ್ ಆಯ್ಕೆ

0

ಬೆಳ್ತಂಗಡಿ: ಚೇಂಬರ್ ಆಫ್ ಕಾಮರ್ಸ್ & ಇಂಡಸ್ಟ್ರೀಸ್ ಬೆಳ್ತಂಗಡಿಯ ನೂತನ ಅಧ್ಯಕ್ಷರಾಗಿ ಶಶಿಧರ ಪೈ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಸಂಘದ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ಇತ್ತೀಚೆಗೆ ನಡೆದಿದ್ದು, ಅಧ್ಯಕ್ಷರಾಗಿ ಶಶಿಧರ ಪೈ ಅವರೊಂದಿಗೆ ವಿವಿಧ ಜವಾಬ್ದಾರಿಗಳಿಗೆ ಪದಾಧಿಕಾರಿಗಳನ್ನು ಅವಿರೋಧವಾಗಿ ಆಯ್ಕೆ ಮಾಡಲಾಯಿತು.

ಕಾರ್ಯದರ್ಶಿಯಾಗಿ ಚಿದಾನಂದ ಇಡ್ಯಾ, ಜಂಟಿ ಕಾರ್ಯದರ್ಶಿಯಾಗಿ ಶಾಂಭವಿ ಪಿ.ಬಂಗೇರ, ಉಪಾಧ್ಯಕ್ಷರಾಗಿ ಶೀತಲ್ ಜೈನ್ ಹಾಗೂ ಕೋಶಾಧಿಕಾರಿಯಾಗಿ ವಿಲ್ಸನ್ ಗೊನ್ಸಾಲ್ವಿಸ್ ಆಯ್ಕೆಯಾಗಿದ್ದಾರೆ.ಬೆಳ್ತಂಗಡಿ ತಾಲೂಕಿನ ವ್ಯಾಪಾರ, ಕೈಗಾರಿಕೆ ಹಾಗೂ ಉದ್ಯಮ ಕ್ಷೇತ್ರದ ಅಭಿವೃದ್ಧಿಗೆ ಚೇಂಬರ್ ಆಫ್ ಕಾಮರ್ಸ್ & ಇಂಡಸ್ಟ್ರೀಸ್ ಪ್ರಮುಖ ವೇದಿಕೆಯಾಗಿ ಕಾರ್ಯನಿರ್ವಹಿಸುತ್ತಿದೆ.

ಸ್ಥಳೀಯ ಉದ್ಯಮಿಗಳು ಹಾಗೂ ವ್ಯಾಪಾರಸ್ಥರ ಸಮಸ್ಯೆಗಳಿಗೆ ಸ್ಪಂದಿಸುವುದು, ವ್ಯಾಪಾರ–ವಾಣಿಜ್ಯ ಕ್ಷೇತ್ರದ ಬೆಳವಣಿಗೆಗೆ ಪೂರಕ ವಾತಾವರಣ ನಿರ್ಮಿಸುವುದು ಹಾಗೂ ಉದ್ಯಮಿಗಳ ಹಿತಾಸಕ್ತಿಗಳನ್ನು ಸಂಬಂಧಪಟ್ಟ ಇಲಾಖೆಗಳ ಗಮನಕ್ಕೆ ತರುವುದು ಸಂಘದ ಪ್ರಮುಖ ಕಾರ್ಯಗಳಲ್ಲಿ ಒಂದಾಗಿದೆ.

ನೂತನ ಪದಾಧಿಕಾರಿಗಳ ನೇತೃತ್ವದಲ್ಲಿ ಸಂಘವು ಇನ್ನಷ್ಟು ಸಕ್ರಿಯವಾಗಿ ಕಾರ್ಯನಿರ್ವಹಿಸುವ ನಿರೀಕ್ಷೆ ವ್ಯಕ್ತವಾಗಿದ್ದು, ಬೆಳ್ತಂಗಡಿ ತಾಲೂಕಿನ ವ್ಯಾಪಾರ–ವಾಣಿಜ್ಯ ಮತ್ತು ಕೈಗಾರಿಕಾ ಕ್ಷೇತ್ರದ ಅಭಿವೃದ್ಧಿಗೆ ಹಲವು ಹೊಸ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಉದ್ದೇಶ ಹೊಂದಿದೆ ಎಂದು ತಿಳಿದುಬಂದಿದೆ.

LEAVE A REPLY

Please enter your comment!
Please enter your name here