ಧರ್ಮಸ್ಥಳದಲ್ಲಿ 28ನೇ ವರ್ಷದ ಭಜನಾ ಕಮ್ಮಟ ಉದ್ಘಾಟನೆ

0

ಧರ್ಮಸ್ಥಳ : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಭಜನಾ ಪರಿಷತ್ ವತಿಯಿಂದ ಸೆ.28ರಿಂದ ಅ. 4ರವರೆಗೆ ನಡೆಯಲಿರುವ 28ನೇ ವರ್ಷದ ಭಜನಾ ಕಮ್ಮಟದ ಉದ್ಘಾಟನಾ ಸಮಾರಂಭಸೆ.28ರಂದು ಧರ್ಮಸ್ಥಳ ಮಹೋತ್ಸವ ಸಭಾಭವನದಲ್ಲಿ ನಡೆಯಿತು.

ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರು ಅಧ್ಯಕ್ಷತೆ ವಹಿಸಿದ್ದರು.ಭಜನಾ ಕಮ್ಮಟವನ್ನು ದೀಪ ಪ್ರಜ್ವಲಿಸು ವುದರೊಂದಿಗ ಸುಬ್ರಹ್ಮಣ್ಯ ಮಹಾಸಂಸ್ಥಾದ ಶ್ರೀ ವಿದ್ಯಾಪ್ರಸನ್ನತೀರ್ಥ ಶ್ರೀಪಾದಂಗಳವವರು ಉದ್ಘಾಟನೆ ನೆರವೇರಿಸಿದರು. ಮಾಣಿಲ ಶ್ರೀ ಧಾಮ ಸೇವಾ ಪ್ರತಿಷ್ಠಾನದ ಶ್ರೀ ಮೋಹನದಾಸ ಸ್ವಾಮೀಜಿ, ಮಾತೃಶ್ರೀ ಡಾ. ಹೇಮಾವತಿ ವಿ.ಹೆಗ್ಗಡೆ,ಶ್ರೀ ಕ್ಷೇತ್ರ ಧರ್ಮಸ್ಥಳ ಡಿ. Harshenda ಕುಮಾರ್, ರಾಜ್ಯ ಪರಿಷತ್ ರಾಜ್ಯ ಅಧ್ಯಕ್ಷ ಚಂದ್ರಶೇಖರ ಸಾಲಿಯಾನ್, ಉಪಾಧ್ಯಕ್ಷ ರಾಜೇಂದ್ರ ಕುಮಾರ್ ಬಸ್ರುರು, ಸುಪ್ರಿಯಾ ಹರ್ಷoದ್ರ ಕುಮಾರ್, ನಿಶ್ಚಲ್ ಕುಮಾರ್, ಐಶ್ವರ್ಯ ನಿಶ್ಚಲ್ ಕುಮಾರ್ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಕ್ಷೇತ್ರದ ವಿವಿಧ ವಿಭಾಗದ ಮುಖ್ಯಸ್ಥರು, 204 ಶಿಬಿರಾರ್ಥಿಗಳು, ಭಜನಾ ಕಮ್ಮಟ ಕಾರ್ಯದರ್ಶಿ ವೀರು ಶೆಟ್ಟಿ, ಸದಸ್ಯರು, ಹಾಜರಿದ್ದರು.ಭಜನಾ ಕಮ್ಮಟದ ಸಂಚಾಲಕ ಜಿ. ಸುಬ್ರಹ್ಮಣ್ಯ ಪ್ರಸಾದ್ ಪ್ರಸ್ತಾವನೆಯೊಂದಿಗೆ ಸ್ವಾಗತಿಸಿ ದ. ಕ. ಜಿಲ್ಲಾ ಸಮನ್ವಯಾಧಿಕಾರಿ ಸಂತೋಷ್ ಪಿ. ಅಳಿಯೂರು ವಂದಿಸಿದರು.ಶಾಂತಿವನ ಟ್ರಸ್ಟ್ ಯೋಗ ನಿರ್ದೇಶಕ ಶಶಿಕಾಂತ ಜೈನ್ ಸ್ವಸ್ತಿ ಮಂತ್ರ ಗೈದರು. ಪುದುವೆಟ್ಟು ಶ್ರೀ ಧ. ಮ. ಪ್ರಾಥಮಿಕ ಶಾಲಾ ಶಿಕ್ಷಕ ನಿಶಾಂತ್ ನಿರೂಪಿಸಿದರು.

LEAVE A REPLY

Please enter your comment!
Please enter your name here