ಪಟ್ರಮೆ ಕಾಲೋನಿಯಲ್ಲಿ ಹದಗೆಟ್ಟ ರಸ್ತೆ: ಚುನಾವಣಾ ಬಹಿಷ್ಕಾರಕ್ಕೆ ಗ್ರಾಮಸ್ಥರ ಎಚ್ಚರಿಕೆ

0

ಪಟ್ರಮೆ: ಬೆಳ್ತಂಗಡಿ ತಾಲೂಕಿನ ಪಟ್ರಮೆ-ಸಂಕೇಶ-ಮಣಿಯೇರು ಎಸ್‌ಟಿ/ಎಸ್‌ಸಿ ಕಾಲೋನಿಯ 2.5 ಕಿ.ಮೀ. ಹಾಗೂ ಪಟ್ರಮೆ-ಬರ್ಕಳ-ಶೀಮುಳ್ಳು 3 ಕಿ.ಮೀ. ಉದ್ದದ ರಸ್ತೆಗಳ ಕಾಂಕ್ರೀಟೀಕರಣಕ್ಕೆ ಕಳೆದ 10 ವರ್ಷಗಳಿಂದ ಅಧಿಕಾರಿಗಳು ಹಾಗೂ ಸಂಬಂಧಪಟ್ಟ ಇಲಾಖೆಗಳಿಗೆ ಮನವಿ ಸಲ್ಲಿಸುತ್ತಿದ್ದರೂ ಯಾವುದೇ ಪ್ರಯೋಜನವಾಗಿಲ್ಲ ಎಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ರಸ್ತೆಗಳ ಹದಗೆಟ್ಟ ಸ್ಥಿತಿಯಿಂದ ಗ್ರಾಮಸ್ಥರು ಹಾಗೂ ವಾಹನ ಸವಾರರು ತೊಂದರೆ ಅನುಭವಿಸುತ್ತಿದ್ದು, ಹಲವು ವರ್ಷಗಳಿಂದ ಬೇಡಿಕೆ ಸಲ್ಲಿಸಿದರೂ ರಸ್ತೆ ಅಭಿವೃದ್ಧಿಗೆ ಕ್ರಮ ಕೈಗೊಳ್ಳದ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳ ವಿರುದ್ಧ ಗ್ರಾಮಸ್ಥರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ತಮ್ಮ ಬೇಡಿಕೆ ಈಡೇರುವವರೆಗೆ ಮುಂಬರುವ ಎಲ್ಲಾ ಚುನಾವಣೆಗಳನ್ನು ಬಹಿಷ್ಕರಿಸುವುದಾಗಿ ಎಚ್ಚರಿಕೆ ನೀಡಿರುವ ಗ್ರಾಮಸ್ಥರು, ಈ ಕುರಿತು ರಸ್ತೆಯ ಬದಿಯಲ್ಲಿ ಬ್ಯಾನರ್ ಅಳವಡಿಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

LEAVE A REPLY

Please enter your comment!
Please enter your name here