ಶ್ರೀ ಗುರುದೇವ ಪ್ರಥಮ ದರ್ಜೆ ಕಾಲೇಜಿನ ಸಾಹಿತ್ಯ ಮತ್ತು ಲಲಿತ ಕಲಾ ಸಂಘದ ವತಿಯಿಂದ 2026-27ನೇ ಸಾಲಿನ “ಭಿತ್ತಿಪತ್ರ” ಅನಾವರಣ ಕಾರ್ಯಕ್ರಮ

0

ಬೆಳ್ತಂಗಡಿ : ಶ್ರೀ ಗುರುದೇವ ಪ್ರಥಮ ದರ್ಜೆ ಕಾಲೇಜಿನ ಸಾಹಿತ್ಯ ಮತ್ತು ಲಲಿತ ಕಲಾ ಸಂಘದ ವತಿಯಿಂದ 2026-27ನೇ ಸಾಲಿನ “ಭಿತ್ತಿಪತ್ರ” ಅನಾವರಣ ಕಾರ್ಯಕ್ರಮವು ಇತ್ತೀಚೆಗೆ ಸಂಸ್ಥೆಯ ಗುರುದೇವ ಸಭಾಭವನದಲ್ಲಿ ಸಂಭ್ರಮದಿಂದ ಜರುಗಿತು.​

ಕಾರ್ಯಕ್ರಮದಲ್ಲಿ ಶ್ರೀ ಗುರುದೇವ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಸುಕೇಶ್ ಕುಮಾರ್ ಅವರು ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದರು. ಶ್ರೀ ಗುರುದೇವ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾದ ಡಾ. ಸವಿತಾ ಅವರು ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು.

​ವೇದಿಕೆಯಲ್ಲಿ ಶ್ರೀ ಗುರುದೇವ ಪದವಿ ಪೂರ್ವ ಕಾಲೇಜಿನ ಉಪಪ್ರಾಂಶುಪಾಲರಾದ ಸಮೀವುಲ್ಲಾ, ಸಾಹಿತ್ಯ ಮತ್ತು ಲಲಿತ ಕಲಾ ಸಂಘದ ಸಂಯೋಜಕರಾದ ಇಂಗ್ಲಿಷ್ ಭಾಷಾ ಉಪನ್ಯಾಸಕಿ ಸುವರ್ಣ ಪೈ ಹಾಗೂ ಕನ್ನಡ ಭಾಷಾ ಉಪನ್ಯಾಸಕಿ ಸತೀಶ್ ಸಿ. ಸಾಲ್ಯಾನ್ ಉಪಸ್ಥಿತರಿದ್ದರು.​

ಕಾಲೇಜಿನ ಉಪನ್ಯಾಸಕ ವೃಂದದವರು, ಕಚೇರಿ ಸಿಬ್ಬಂದಿ ಹಾಗೂ ಸಮಸ್ತ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಪಾಲ್ಗೊಂಡು ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು.​ಕಾರ್ಯಕ್ರಮದ ಆರಂಭದಲ್ಲಿ ತೃತೀಯ ಬಿ.ಕಾಮ್ ವಿದ್ಯಾರ್ಥಿನಿ ತಶ್ರೀಫಾ ಎಲ್ಲರನ್ನು ಸ್ವಾಗತಿಸಿದರು.

ತೃತೀಯ ಬಿ.ಎ ವಿದ್ಯಾರ್ಥಿನಿ ಆಯಿಷಾ ಕಾರ್ಯಕ್ರಮವನ್ನು ನಿರೂಪಿಸಿ, ಅಂತಿಮವಾಗಿ ತೃತೀಯ ಬಿ.ಎ ವಿದ್ಯಾರ್ಥಿನಿ ನಂದಿನಿ ವಂದನಾರ್ಪಣೆಗೈದರು.

LEAVE A REPLY

Please enter your comment!
Please enter your name here