ಮುಂಡಾಜೆ ಗೌಡರ ಯಾನೆ ಒಕ್ಕಲಿಗರ ಗ್ರಾಮ ಸಮಿತಿಯ ವಾರ್ಷಿಕ ಮಹಾ ಸಭೆ ಕೆಂಪ ಗೌಡ ಪ್ರಶಸ್ತಿ ವಿಜೇತ ಪದ್ಮ ಗೌಡ, ಕೊಳ್ತಿಗೆ ನಾರಾಯಣ ಗೌಡ, ಜಯಂತಿ. ಟಿ ಅವರಿಗೆ ಸನ್ಮಾನ

0

ಮುಂಡಾಜೆ: ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ವಾರ್ಷಿಕ ಮಹಾ ಸಭೆ ತಾಲೂಕು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ಉಪಾಧ್ಯಕ್ಷರಾದ ನಾರಾಯಣ ಗೌಡ ದೇವಸ್ಯ ಅವರ ಮನೆಯಲ್ಲಿ ನಡೆಯಿತು.

ಈ ಸಂಧರ್ಭದಲ್ಲಿ ಮುಂಡಾಜೆ ಗ್ರಾಮ ಸಮಿತಿಯ ವತಿಯಿಂದ ಕೆಂಪ ಗೌಡ ಪ್ರಶಸ್ತಿ ವಿಜೇತ ಪದ್ಮ ಗೌಡ, ನಿವೃತ್ತ ಶಿಕ್ಷಕಿ ಜಯಂತಿ ಟಿ, ಯಕ್ಷಗಾನ ರಂಗದಲ್ಲಿ ವಿಶೇಷ ಸೇವೆ ಸಲ್ಲಿಸಿದ ಕೊಳ್ತಿಗೆ ನಾರಾಯಣ ಗೌಡ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು. ಹಾಗೂ ಸಂಘದ ವ್ಯಾಪ್ತಿಯಲ್ಲಿ ಎಸ್ ಎಸ್ ಎಲ್ ಸಿ ಮತ್ತು ಪಿ ಯು ಸಿ ಯಲ್ಲಿ ಅತೀ ಹೆಚ್ಚು ಅಂಕ ಪಡೆದ ಸಮುದಾಯದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು.

ಈ ಸಂದರ್ಭದಲ್ಲಿ ಸಂಘದ ಕಾರ್ಯದರ್ಶಿ ಗಣೇಶ್ ಗೌಡ,ಉಪಾಧ್ಯಕ್ಷ ನಾರಾಯಣ ಗೌಡ ದೇವಸ್ಯ ನಿರ್ದೇಶಕ ಜಯಾನಂದ ಗೌಡ, ಗ್ರಾಮ ಸಮಿತಿ ಅಧ್ಯಕ್ಷ ಆನಂದ ಗೌಡ ಹಾಗೂ ಗ್ರಾಮ ಸಮಿತಿಯ ಪ್ರಮುಖರು ಉಪಸ್ಥಿತರಿದ್ದರು. ಶೋಭಾ ನಾರಾಯಣ ಗೌಡ ಕಾರ್ಯಕ್ರಮ ನಿರೂಪಿಸಿ ಯಶೋಧ ರವರು ಸ್ವಾಗತಿಸಿ ಧರ್ನಪ್ಪ ಗೌಡ ಧನ್ಯವಾದವಿತ್ತರು.

LEAVE A REPLY

Please enter your comment!
Please enter your name here