






ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲಾ ಪದವಿ ಪೂರ್ವ ಕಾಲೇಜುಗಳ ಪ್ರಾಚಾರ್ಯರ ಸಂಘ, ಮಂಗಳೂರು ವತಿಯಿಂದ ಶಿಕ್ಷಕರ ದಿನಾಚರಣೆಯ ಪ್ರಯುಕ್ತ ಜಿಲ್ಲೆಯ ಪದವಿ ಪೂರ್ವ ಕಾಲೇಜುಗಳ ಉಪನ್ಯಾಸಕರಿಗಾಗಿ ಉಜಿರೆಯ ಎಸ್ಡಿಎಂ ಕಾಲೇಜಿನಲ್ಲಿ ಜಿಲ್ಲಾಮಟ್ಟದ ಶಿಕ್ಷಕರ ದಿನಾಚರಣೆ ಹಾಗೂ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿತ್ತು.


ಕಾರ್ಯಕ್ರಮದ ಅಂಗವಾಗಿ ಜಿಲ್ಲೆಯ ಸುಮಾರು 11 ಪದವಿ ಪೂರ್ವ ಕಾಲೇಜುಗಳ ಉಪನ್ಯಾಸಕರ ತಂಡಗಳ ನಡುವೆ ಸಮೂಹ ನೃತ್ಯ ಸ್ಪರ್ಧೆ ನಡೆಯಿತು. ಸ್ಪರ್ಧೆಯಲ್ಲಿ ಬೆಳ್ತಂಗಡಿಯ ಶ್ರೀ ಗುರುದೇವ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕರ ನೃತ್ಯ ತಂಡವು ತೃತೀಯ ಸ್ಥಾನ ಪಡೆದು ಗಮನಾರ್ಹ ಸಾಧನೆ ಮಾಡಿದೆ.ತಂಡವು ₹10,000 ನಗದು ಬಹುಮಾನ ಹಾಗೂ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿದೆ.
ಈ ಸಾಧನೆಗೆ ಸಂತಸ ವ್ಯಕ್ತಪಡಿಸಿರುವ ಸಂಸ್ಥೆಯ ಅಧ್ಯಕ್ಷೆ ಪ್ರೀತಿತ ಧರ್ಮವಿಜೇತ್, ಟ್ರಸ್ಟಿ ಬಿನುತಾ ಬಂಗೇರ ಅವರು ಸ್ಪರ್ಧೆಯಲ್ಲಿ ಭಾಗವಹಿಸಿದ ಎಲ್ಲಾ ಉಪನ್ಯಾಸಕರಿಗೆ ಅಭಿನಂದನೆ ಸಲ್ಲಿಸಿದ್ದಾರೆ. ಉಪನ್ಯಾಸಕರ ಈ ಸಾಧನೆಯು ಕಾಲೇಜಿನ ಸಾಂಸ್ಕೃತಿಕ ಚಟುವಟಿಕೆಗಳಿಗೆ ಮತ್ತಷ್ಟು ಪ್ರೋತ್ಸಾಹ ನೀಡಿದೆ.









