38 ವರ್ಷ ಸೇವೆ ಸಲ್ಲಿಸಿದ ನಾರ್ಯ ಅಂಗನವಾಡಿ ಕಾರ್ಯಕರ್ತೆ ಜಾನಕಿ ಅವರಿಗೆ ಬೀಳ್ಕೊಡುಗೆ

0

ಧರ್ಮಸ್ಥಳ: ಬೆಳ್ತಂಗಡಿ ತಾಲೂಕು ಧರ್ಮಸ್ಥಳ ಗ್ರಾಮದ ನಾರ್ಯ ಅಂಗನವಾಡಿ ಕೇಂದ್ರದ ಕಾರ್ಯಕರ್ತೆ ಜಾನಕಿ ಅವರು ಕಳೆದ 38 ವರ್ಷಗಳ ಕಾಲ ಅಂಗನವಾಡಿ ಕಾರ್ಯಕರ್ತೆಯಾಗಿ ನಿಸ್ವಾರ್ಥ ಸೇವೆ ಸಲ್ಲಿಸಿ ಆಗಸ್ಟ್ 31 ರಂದು ಸೇವಾ ನಿವೃತ್ತಿ ಹೊಂದಿದ್ದಾರೆ.

ಅವರ ಸೇವೆಯನ್ನು ಗುರುತಿಸಿ ನಾರ್ಯ ಅಂಗನವಾಡಿ ಬಾಲ ವಿಕಾಸ ಸಮಿತಿ ವತಿಯಿಂದ ಗೌರವಪೂರ್ವಕ ಸನ್ಮಾನ ಹಾಗೂ ಬೀಳ್ಕೊಡುಗೆ ಸಮಾರಂಭ ನೆರವೇರಿಸಲಾಯಿತು.ಬಾಲ ವಿಕಾಸ ಸಮಿತಿ ಅಧ್ಯಕ್ಷೆ ಗಾಯತ್ರಿ ಅವರು ಸರ್ವರನ್ನು ಸ್ವಾಗತಿಸಿ ಹಿತನುಡಿಗಳನ್ನಾಡಿದರು.

ಸಮಿತಿ ಸದಸ್ಯೆ ಕವಿತಾ ಶಿಕ್ಷಕಿಯ ಕಾರ್ಯವೈಖರಿಯ ಬಗ್ಗೆ ತಮ್ಮ ಅನಿಸಿಕೆ ಹಂಚಿಕೊಂಡರು.

ಬಾಲ ವಿಕಾಸ ಸಮಿತಿಯ ಎಲ್ಲಾ ಸದಸ್ಯರು, ಅಂಗನವಾಡಿ ಸಹಾಯಕಿ ವಿಮಲ, ದೊಂಡೋಲೆ ಅಂಗನವಾಡಿ ಕಾರ್ಯಕರ್ತೆ ಸುಮಿತ್ರಾ, ಪೋಷಕರು ಹಾಗೂ ಮಕ್ಕಳ ಸಹಭಾಗಿತ್ವದಲ್ಲಿ ಕಾರ್ಯಕ್ರಮ ಯಶಸ್ವಿಯಾಗಿ ಜರುಗಿತು.

ಕೊನೆಯಲ್ಲಿ ಸ್ತ್ರೀ ಶಕ್ತಿ ಸಂಘದ ಸದಸ್ಯೆ ಸುಗುಣ ಅವರು ಧನ್ಯವಾದ ಸಮರ್ಪಿಸಿದರು.

LEAVE A REPLY

Please enter your comment!
Please enter your name here