ಬೆಳ್ತಂಗಡಿ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ: ಆಮಂತ್ರಣ ಪತ್ರಿಕೆ ಬಿಡುಗಡೆ

0

ಬೆಳ್ತಂಗಡಿ: ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ, ಬೆಳ್ತಂಗಡಿ ತಾಲೂಕು ಇದರ ವತಿಯಿಂದ ನಡೆಯಲಿರುವ ಪ್ರತಿಭಾ ಪುರಸ್ಕಾರ ಸಮಾರಂಭದ ಆಮಂತ್ರಣ ಪತ್ರಿಕೆಯನ್ನು ಸೆ.28ರಂದು ಬಿಡುಗಡೆಗೊಳಿಸಲಾಯಿತು.

ಸಮಾರಂಭವು ಅ.18ರಂದು ನಡೆಯಲಿದ್ದು, ಅರ್ಹ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.2026ರ ಮಾರ್ಚ್/ಏಪ್ರಿಲ್ ತಿಂಗಳಲ್ಲಿ ನಡೆದ ಎಸ್‌ಎಸ್‌ಎಲ್‌ಸಿ ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಶೇ.90 ಹಾಗೂ ಅದಕ್ಕಿಂತ ಹೆಚ್ಚು ಅಂಕಗಳನ್ನು ಪಡೆದ ಬೆಳ್ತಂಗಡಿ ತಾಲೂಕಿನ ಗೌಡರ ಯಾನೆ ಒಕ್ಕಲಿಗ ಸಮುದಾಯದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಲಾಗುವುದು.

ಅರ್ಹ ವಿದ್ಯಾರ್ಥಿಗಳು ವಾಣಿ ಶಿಕ್ಷಣ ಸಂಸ್ಥೆಯ ಕಚೇರಿಯಿಂದ ಅರ್ಜಿ ಪಡೆದು, ಗ್ರಾಮ ಸಮಿತಿ ಅಧ್ಯಕ್ಷರು ಅಥವಾ ಕಾರ್ಯದರ್ಶಿಯವರಿಂದ ದೃಢೀಕರಿಸಿ ಅ.10ರೊಳಗೆ ವಾಣಿ ಶಿಕ್ಷಣ ಸಂಸ್ಥೆಯ ಕಚೇರಿಯಲ್ಲಿ ಸಲ್ಲಿಸಬೇಕು. ಸರ್ಕಾರಿ ಇಲಾಖೆಗಳ ವತಿಯಿಂದ ನಡೆದ ಸಾಂಸ್ಕೃತಿಕ ಹಾಗೂ ಆಟೋಟ ಸ್ಪರ್ಧೆಗಳಲ್ಲಿ ಭಾಗವಹಿಸಿ ವಿಜೇತರಾದವರು, ಜಿಲ್ಲಾ ಮಟ್ಟದಲ್ಲಿ ಪ್ರತಿಭಾ ಸನ್ಮಾನ ಪಡೆದವರು ಹಾಗೂ ರಾಜ್ಯ ಮಟ್ಟಕ್ಕೆ ಆಯ್ಕೆಯಾದ ವಿದ್ಯಾರ್ಥಿಗಳೂ ಅರ್ಜಿ ಸಲ್ಲಿಸಬಹುದಾಗಿದೆ.

ಇಂತಹ ಅರ್ಜಿಗಳನ್ನು ಅ.12ರೊಳಗೆ ಸಲ್ಲಿಸಬೇಕು. ನಂತರ ಬಂದ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ ಎಂದು ಸಂಘದ ಪ್ರಕಟಣೆ ತಿಳಿಸಿದೆ.ಪ್ರತಿಭಾ ಪುರಸ್ಕಾರ ಕಾರ್ಯಕ್ರಮದ ಮೂಲಕ ಸಮುದಾಯದ ವಿದ್ಯಾರ್ಥಿಗಳ ಶೈಕ್ಷಣಿಕ ಹಾಗೂ ವಿವಿಧ ಕ್ಷೇತ್ರಗಳ ಪ್ರತಿಭೆಯನ್ನು ಗುರುತಿಸಿ ಪ್ರೋತ್ಸಾಹಿಸುವ ಉದ್ದೇಶ ಹೊಂದಲಾಗಿದೆ.

ಆಮಂತ್ರಣ ಪತ್ರಿಕೆ ಬಿಡುಗಡೆ ಸಂದರ್ಭದಲ್ಲಿ ಸಂಘದ ಗೌರವಾಧ್ಯಕ್ಷ ಹೆಚ್. ಪದ್ಮ ಗೌಡ ಬೆಳಾಲು, ಅಧ್ಯಕ್ಷ ಕುಶಾಲಪ್ಪ ಗೌಡ ಪೂವಾಜೆ, ಕಾರ್ಯದರ್ಶಿ ಗಣೇಶ್ ಗೌಡ, ಕೋಶಾಧಿಕಾರಿ ಯುವರಾಜ್ ಅನಾರು, ಉಪಾಧ್ಯಕ್ಷ ನಾರಾಯಣ ಗೌಡ ದೇವಸ್ಯ, ಜತೆ ಕಾರ್ಯದರ್ಶಿ ಶ್ರೀನಾಥ್ ನಡ, ಸಂಘಟನಾ ಕಾರ್ಯದರ್ಶಿ ಕೃಷ್ಣಪ್ಪ ಗೌಡ ದೇವಸ ಸವಣಾಲು, ಜಯಾನಂದ ಗೌಡ ಪ್ರಜ್ವಲ್ ಬೆಳ್ತಂಗಡಿ, ಗೋಪಾಲಕೃಷ್ಣ ಗುಲ್ಲೋಡಿ, ವಸಂತ ಗೌಡ ನಡ, ಬಾಲಕೃಷ್ಣ ಗೌಡ ಬಿರ್ಮೊಟ್ಟು, ವಿಜಯ್ ಗೌಡ ನ್ಯಾಯತರ್ಪು, ಮಾಧವ ಗೌಡ ಬೆಳ್ತಂಗಡಿ, ದಿನೇಶ್ ಗೌಡ ಕೊಯ್ಯರು, ಉಷಾದೇವಿ ಕಿನ್ಯಾಜೆ, ಭವಾನಿ ಕೆ., ಪುರಂದರ ಗೌಡ, ಚಂದ್ರಕಾಂತ ನಿಡ್ಡಾಜೆ, ಕಾಂತಪ್ಪ ಗೌಡ ಪಾರೆಂಕಿ, ಲೀಲಾ ಬೆಳಾಲು, ಸುರೇಶ್ ಕೌಡಂಗೆ, ತೀಕ್ಷಿತ್ ಕಲ್ಪಟ್ಟು, ಪ್ರದೀಪ್ ನಾಗಾಜೆ, ಭರತ್ ಪುದುವೆಟ್ಟು, ಶ್ಯಾಮ್ ಸುಂದರ ಗೌಡ ನಡ, ಪ್ರವೀಣ್ ವಿ.ಜಿ., ಆನಂದಗೌಡ ಮೈರ್ನೋಡಿ ದಿಡುಪೆ ಮೊದಲಾದವರು ಉಪಸ್ಥಿತರಿದ್ದರು.

ಹೆಚ್ಚಿನ ಮಾಹಿತಿಗಾಗಿ:ಯುವರಾಜ್ ಅನಾರು: 96110312412ಗಣೇಶ್ ಗೌಡ: 94489311513ಶ್ರೀನಾಥ್ ಕೆ.ಎಂ.: 95915908404ಉಷಾದೇವಿ: 944845012

LEAVE A REPLY

Please enter your comment!
Please enter your name here