ಬೆಳ್ತಂಗಡಿ ಮಂಜುಶ್ರೀ ಸೀನಿಯರ್ ಛೇoಬರ್ ವತಿಯಿಂದ ಕಕ್ಕಿಂಜೆ ಸರಕಾರಿ ಹಿ.ಪ್ರಾ. ಶಾಲೆಗೆ ಕಂಪ್ಯೂಟರ್ ಪ್ರಿಂಟರ್ ಕೊಡುಗೆ

0

ಕಕ್ಕಿಂಜೆ : ಮಂಜುಶ್ರೀ ಸೀನಿಯರ್ ಛೇoಬರ್ ವತಿಯಿಂದ ಕಕ್ಕಿಂಜೆ ಅಣಿಯೂರು ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆಗೆ ಕಂಪ್ಯೂಟರ್ ಪ್ರಿಂಟರ್ ಹಸ್ತಾoತರ ಕಾರ್ಯಕ್ರಮ ಸೆ. 29ರಂದು ಶಾಲೆಯಲ್ಲಿ ನಡೆಯಿತು.

ಸಮಾರಂಭದ ಅಧ್ಯಕ್ಷತೆಯನ್ನು ಸೀನಿಯರ್ ಛೇ0ಬರ್ ಅಧ್ಯಕ್ಷ ಜಾನ್ ಅರ್ವಿನ್ ಡಿಸೋಜ ವಹಿಸಿದ್ದರು.ಶಾಲಾ ಮುಖ್ಯ ಶಿಕ್ಷಕಿ ಉಷಾ ಸಿ. ಜೆ., ಶಾಲಾ ಎಸ್ ಡಿ ಎಂ ಸಿ ಅಧ್ಯಕ್ಷ ಹಕೀಮ್ ಪ್ರಿಂಟರ್ ಸ್ವೀಕರಿಸಿ ಕೃತಜ್ಞತೆ ಸಲ್ಲಿಸಿದರು.

ಮಂಜುಶ್ರೀ ಸೀನಿಯರ್ ಛೇ0ಬರ್ ನಿಕಟ ಪೂರ್ವ ಅಧ್ಯಕ್ಷ ಮಂಜುನಾಥ ರೈ, ಉಪಾಧ್ಯಕ್ಷ ಪುಷ್ಪರಾಜ್ ಶೆಟ್ಟಿ, ಕಾರ್ಯದರ್ಶಿ ಶರತ್ ಕುಮಾರ್ ಕೆ., ಸದಸ್ಯರಾದ ಎಂ. ಆರ್. ಪ್ರಸನ್ನ, ಜಾರಪ್ಪ ಪೂಜಾರಿ ಉಪಸ್ಥಿತರಿದ್ದರು.

ಶಾಲಾ ಶಿಕ್ಷಕಿ ಮಾಲಾ ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು. ಶಿಕ್ಷಕಿ ಸುಚಿತ್ರಾ ವಂದಿಸಿದರು, ಶಿಕ್ಷಕ ವೃಂದ, ಶಾಲಾ ಮಕ್ಕಳು ಹಾಜರಿದ್ದರು.

LEAVE A REPLY

Please enter your comment!
Please enter your name here