






ಲಾಯಿಲ:ಗ್ರಾಮದ ಕಾಶಿಬೆಟ್ಟು ಎಂಬಲ್ಲಿ ಸುಮಾರು ರೂ. 65 ಲಕ್ಷ ವೆಚ್ಚದಲ್ಲಿ ನಿರ್ಮಾಣಗೊಳ್ಳಲಿರುವ ಆಯುಷ್ಮಾನ್ ಆರೋಗ್ಯ ಕೇಂದ್ರ ಕಟ್ಟಡದ ಶಿಲಾನ್ಯಾಸ ಕಾರ್ಯಕ್ರಮವನ್ನು ಸಂಸದ ಕ್ಯಾ. ಬ್ರಿಜೇಶ್ ಚೌಟ ಹಾಗೂ ಶಾಸಕ ಹರೀಶ್ ಪೂಂಜ ಅವರು ಸೆ. 29 ರಂದು ನೆರವೇರಿಸಿದರು.


ಈ ಸಂದರ್ಭದಲ್ಲಿ ತಾಲೂಕು ಆರೋಗ್ಯಾಧಿಕಾರಿಗಳು, ಬಿಜೆಪಿ ಶಕ್ತಿ ಕೇಂದ್ರದ ಪ್ರಮುಖರು, ಲಾಯಿಲ ಮಹಾಶಕ್ತಿ ಕೇಂದ್ರದ ಅಧ್ಯಕ್ಷ… ಮಂಡಲ ಪ್ರಧಾನ ಕಾರ್ಯದರ್ಶಿ ಪ್ರಶಾಂತ್ ಪಾರೆಂಕಿ, ಪ.ಪಂ ಮಾಜಿ ಸದಸ್ಯ ಶರತ್ ಕುಮಾರ್ , ಲಾಯಿಲ ಮಾಜಿ ಗ್ರಾಮ ಪಂಚಾಯತ್ ಸದಸ್ಯರು ಗಣೇಶ್, ಅರವಿಂದ್, ಪ್ರಮುಖರಾದ ಸೀತಾರಾಮ ಬೆಳಾಲು, ಜಗದೀಶ್ ಕನ್ನಾಜೆ, ಮಲವಂತಿಗೆ ಗ್ರಾಮ ಪಂಚಾಯತ್ ಸದಸ್ಯ ದಿನೇಶ್, ಈಶ್ವರ್ ಬೈರ, ಗಣೇಶ್ ನಾವೂರು, ಜಯಂತ್ ಗುರಿಪಳ್ಳ, ಹಾಗೂ ಆಶಾ ಕಾರ್ಯಕರ್ತೆಯರು ಸೇರಿದಂತೆ ಹಲವರು ಉಪಸ್ಥಿತರಿದ್ದರು.









