






ಮಂಗಳೂರು: ಮಂಗಳೂರು ರಿಫೈನರಿ ಆಂಡ್ ಪೆಟ್ರೋಕೆಮಿಕಲ್ಸ್ ಲಿಮಿಟೆಡ್ (ಎಂಆರ್ಪಿಎಲ್) 3ನೇ ಹಂತದ ಘಟಕದಲ್ಲಿ ನಡೆದ ಭೀಕರ ಸ್ಫೋಟ ಜಾಗದಲ್ಲಿ ಕಾರ್ಮಿಕರೊಬ್ಬರ ಮೃತದೇಹ ಸಂಪೂರ್ಣ ಸುಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದೆ.ಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುತ್ತಿದ್ದ ಮೂಲ್ಕಿ ಮೂಲದ ಯುವಕ ಮನೀಶ್ ಕರ್ಕೇರ ಮೃತರು.



ಸ್ಫೋಟದ ನಂತರ ತುರ್ತು ಪರಿಹಾರ ಕಾರ್ಯಾಚರಣೆ ವೇಳೆ ಮೃತದೇಹ ಪತ್ತೆಯಾಗಿದೆ.ಉಳಿದಂತೆ ಶೇ. 35ರಷ್ಟು ಸುಟ್ಟ ಗಾಯಗಳೊಂದಿಗೆ ಪ್ರಾಣಾಪಾಯದಿಂದ ಪಾರಾಗಿರುವ ರಾಜೇಶ್ ಬ್ಯಾಪ್ಟಿಸ್ಟ್ ಅವರು ಶ್ರೀನಿವಾಸ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಗಾಯಗೊಂಡಿರುವ ಇತರ 8 ಮಂದಿ ಸಿಬ್ಬಂದಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ನಗರ ಪೊಲೀಸ್ ಆಯುಕ್ತ ಸುಧೀರ್ ರೆಡ್ಡಿ ತಿಳಿಸಿದ್ದಾರೆ.









