






ನಿಡ್ಲೆ: ಕೊಕ್ಕಡ ವಲಯ ಮಟ್ಟದ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳ ವಿದ್ಯಾರ್ಥಿಗಳ ಕ್ರೀಡಾಕೂಟವು ಅ.1ರಂದು ನಿಡ್ಲೆ ಸರಕಾರಿ ಪ್ರೌಢಶಾಲೆಯಲ್ಲಿ ನಡೆಯಿತು.ನಿವೃತ್ತ ಮುಖ್ಯಶಿಕ್ಷಕ ರಾಜಗುರು ಹೆಬ್ಬಾರ್ ದೀಪ ಬೆಳಗಿಸಿ ಕ್ರೀಡಾಕೂಟವನ್ನು ಉದ್ಘಾಟಿಸಿ ಶುಭ ಹಾರೈಸಿದರು.
ಶಾಲಾ ಎಸ್ಡಿಎಂಸಿ ಕಾರ್ಯಾಧ್ಯಕ್ಷ ಲಕ್ಷ್ಮಣ ಗೌಡ ಅಧ್ಯಕ್ಷತೆ ವಹಿಸಿದ್ದರು. ಪ್ರೌಢಶಾಲಾ ನೋಡಲ್ ಶಿಕ್ಷಕ ವಿಜಯಕುಮಾರ್ ಪ್ರಾಸ್ತಾವಿಕವಾಗಿ ಮಾತನಾಡಿದರು.ಪ್ರಾಥಮಿಕ ಶಾಲಾ ನೋಡಲ್ ಶಿಕ್ಷಕ ಶ್ರೀಧರ್, ಸಿಆರ್ಪಿ ವಿಲ್ಫ್ರೆಡ್ ಹಾಗೂ ಹಿರಿಯರಾದ ವೀರೇಶ್ವರ ಹೆಬ್ಬಾರ್ ಉಪಸ್ಥಿತರಿದ್ದರು.


ಮುಖ್ಯಶಿಕ್ಷಕ ಶರತ್ ಕುಮಾರ್ ಸ್ವಾಗತಿಸಿದರು. ಶೋಲಿ ವಿ.ಜೆ. ಕಾರ್ಯಕ್ರಮ ನಿರೂಪಿಸಿದರು.ವಲಯದ ದೈಹಿಕ ಶಿಕ್ಷಣ ಶಿಕ್ಷಕರು ಕ್ರೀಡಾಕೂಟವನ್ನು ನಡೆಸಿಕೊಟ್ಟರು. ವಿವಿಧ ಶಾಲೆಗಳ ಸಹಶಿಕ್ಷಕರು ತಂಡಗಳ ಮೇಲ್ವಿಚಾರಕರಾಗಿ ಕಾರ್ಯನಿರ್ವಹಿಸಿದ್ದು, ವಲಯದ ಶಾಲೆಗಳ ಕ್ರೀಡಾಪಟುಗಳು ಸ್ಪರ್ಧೆಗಳಲ್ಲಿ ಭಾಗವಹಿಸಿದರು.
ಶಾಲಾ ಎಸ್ಡಿಎಂಸಿ ಸದಸ್ಯರು, ಪೋಷಕರು, ಶಿಕ್ಷಕರು, ಸಿಬ್ಬಂದಿ, ವಿದ್ಯಾರ್ಥಿಗಳು ಹಾಗೂ ಊರವರ ಸಹಕಾರದೊಂದಿಗೆ ಕ್ರೀಡಾಕೂಟ ಯಶಸ್ವಿಯಾಗಿ ನಡೆಯಿತು.









