






ಶಿರ್ಲಾಲು: ಸರ್ಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳು ಇತ್ತೀಚೆಗೆ ನಡೆದ ನಾರಾವಿ ವಲಯ ಮಟ್ಟದ ಕ್ರೀಡಾಕೂಟದಲ್ಲಿ ಅತ್ಯುತ್ತಮ ಸಾಧನೆ ತೋರುವ ಮೂಲಕ ಶಾಲೆಯ ಕೀರ್ತಿ ಪತಾಕೆಯನ್ನು ಹಾರಿಸಿದ್ದಾರೆ.
ಕ್ರೀಡಾಕೂಟದಲ್ಲಿ ಸಾಧನೆಗೈದು ಶಾಲೆಯ ಹೆಮ್ಮೆಯನ್ನು ಇಮ್ಮಡಿಗೊಳಿಸಿದ ಎಲ್ಲಾ ಪ್ರತಿಭಾನ್ವಿತ ಕ್ರೀಡಾಪಟು ವಿದ್ಯಾರ್ಥಿಗಳಿಗೆ ಶಾಲೆಯ ವತಿಯಿಂದ ಹೃತ್ಪೂರ್ವಕ ಅಭಿನಂದನೆಗಳನ್ನು ಸಲ್ಲಿಸಲಾಗಿದೆ.


ವಿದ್ಯಾರ್ಥಿಗಳಿಗೆ ನಿರಂತರ ಮಾರ್ಗದರ್ಶನ ನೀಡಿ, ಅವರಲ್ಲಿ ಅಡಗಿರುವ ಕ್ರೀಡಾ ಪ್ರತಿಭೆಯನ್ನು ಹೊರಹಾಕಲು ಶ್ರಮಿಸಿದ ಶಾಲೆಯ ದೈಹಿಕ ಶಿಕ್ಷಕ ಪುರಂದರ ಸರ್ ಹಾಗೂ ಎಲ್ಲಾ ಸಹ ಶಿಕ್ಷಕರಿಗೆ ಈ ವೇಳೆ ವಿಶೇಷ ಕೃತಜ್ಞತೆಗಳನ್ನು ಅರ್ಪಿಸಲಾಗಿದೆ.
:ಈ ಕ್ರೀಡಾಕೂಟಕ್ಕೆ ತೆರಳಲು ವಿದ್ಯಾರ್ಥಿಗಳಿಗೆ ವಾಹನದ ವ್ಯವಸ್ಥೆಯನ್ನು ಕಲ್ಪಿಸಿ ಸಂಪೂರ್ಣ ಸಹಕಾರ ನೀಡಿದ ಎಸ್‌ಡಿಎಂಸಿ (SDMC) ಅಧ್ಯಕ್ಷರಾದ ಉದಯಕುಮಾರ್, ಎಸ್‌ಡಿಎಂಸಿ ಸದಸ್ಯರಾದ ಮಾಧವ ಪೊಸಂದೋಡಿ, ಹಾಗೂ ವಿವಿಧ ರೀತಿಯಲ್ಲಿ ಬೆನ್ನೆಲುಬಾಗಿ ನಿಂತು ಸಹಾಯ ಹಸ್ತ ಚಾಚಿದ ದಿನೇಶ್ ನಾಯ್ಕ್ ಮತ್ತು ಪ್ರತಿಯೊಬ್ಬ ಹಿತೈಷಿಗಳಿಗೂ ಶಾಲೆಯ ಪರವಾಗಿ ಹೃತ್ಪೂರ್ವಕ ಧನ್ಯವಾದಗಳನ್ನು ತಿಳಿಸಲಾಗಿದೆ.”ವಿದ್ಯಾರ್ಥಿಗಳ ಈ ಅಪೂರ್ವ ಸಾಧನೆಗೆ ಶಿಕ್ಷಕರ ಮಾರ್ಗದರ್ಶನ, ಪೋಷಕರ ಪ್ರೋತ್ಸಾಹ ಮತ್ತು ಊರಿನ ಸಮುದಾಯದ ಒಮ್ಮಲದ ಸಹಕಾರವೇ ಪ್ರಮುಖ ಶಕ್ತಿಯಾಗಿದೆ.
ಈ ಗೆಲುವು ನಮ್ಮೆಲ್ಲರ ಹೆಮ್ಮೆ ಹಾಗೂ ಸಂಭ್ರಮದ ಪ್ರತೀಕ” ಎಂದು ಶಾಲೆಯ ಮುಖ್ಯ ಶಿಕ್ಷಕರು ಹರ್ಷ ವ್ಯಕ್ತಪಡಿಸಿದ್ದಾರೆ.









