ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಗಾಂಧೀಜಿ–ಶಾಸ್ತ್ರಿ ಜಯಂತಿ ಆಚರಣೆ

0

ಬೆಳ್ತಂಗಡಿ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ, ಬೆಳ್ತಂಗಡಿಯಲ್ಲಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್‌ನ ಶ್ರೀ ಮಂಜುನಾಥ ದಳದ ವತಿಯಿಂದ ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಹಾಗೂ ಭಾರತದ ಮಾಜಿ ಪ್ರಧಾನಮಂತ್ರಿ ಲಾಲ್ ಬಹದ್ದೂರ್ ಶಾಸ್ತ್ರಿಯವರ ಜನ್ಮದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು.

ಕಾರ್ಯಕ್ರಮದ ಅಂಗವಾಗಿ ಸರ್ವಧರ್ಮ ಪ್ರಾರ್ಥನೆ, ಶಾಂತಿ ನಡಿಗೆ ಹಾಗೂ ಸ್ವಚ್ಛತಾ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಯಿತು. ಜೊತೆಗೆ ಮಹಾತ್ಮ ಗಾಂಧೀಜಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿಯವರ ಭಾವಚಿತ್ರಗಳಿಗೆ ಪುಷ್ಪನಮನ ಸಲ್ಲಿಸುವ ಮೂಲಕ ಗೌರವ ಸಮರ್ಪಿಸಲಾಯಿತು. ಬುಲ್ ಬುಲ್ ಸ್ಕೌಟ್ ಗೈಡ್ ಹಾಗೂ ಶಾಲಾ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರುಶಾಲೆಯ ಮುಖ್ಯೋಪಾಧ್ಯಾಯರಾದ ಶ್ರೀಮತಿ ಹೇಮಲತಾ ಎಂ. ಆರ್. ಅವರ ಮಾರ್ಗದರ್ಶನದಲ್ಲಿ ಹಾಗೂ ಸ್ಕೌಟ್–ಗೈಡ್ ಸಂಯೋಜಕ ಶಿಕ್ಷಕಿ ಪ್ರಮೀಳಾ ಅವರ ನೇತೃತ್ವದಲ್ಲಿ ಕಾರ್ಯಕ್ರಮವನ್ನು ಆಯೋಜಿಸಲಾಯಿತು.

ವಿದ್ಯಾರ್ಥಿಗಳು, ಸ್ಕೌಟ್–ಗೈಡ್ ಶಿಕ್ಷಕರು ಹಾಗೂ ಶಾಲೆಯ ಶಿಕ್ಷಕ ವೃಂದದವರು ಕಾರ್ಯಕ್ರಮದಲ್ಲಿ ಸಕ್ರಿಯವಾಗಿ ಭಾಗವಹಿಸಿ ಸಂಪೂರ್ಣ ಸಹಕಾರ ನೀಡಿದರು.ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿಯವರ ಜೀವನಾದರ್ಶಗಳಾದ ಸತ್ಯ, ಅಹಿಂಸೆ, ಸರಳತೆ, ಶಿಸ್ತು, ಸ್ವಚ್ಛತೆ ಮತ್ತು ದೇಶಭಕ್ತಿಯನ್ನು ವಿದ್ಯಾರ್ಥಿಗಳಲ್ಲಿ ಬೆಳೆಸುವುದು ಕಾರ್ಯಕ್ರಮದ ಮುಖ್ಯ ಉದ್ದೇಶವಾಗಿತ್ತು.ಮಹಾನ್ ನಾಯಕರ ಆದರ್ಶಗಳನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಂಡು, ಸ್ವಚ್ಛ ಹಾಗೂ ಶಾಂತಿಯುತ ಸಮಾಜದ ನಿರ್ಮಾಣಕ್ಕೆ ಕೈಜೋಡಿಸೋಣ ಎಂಬ ಸಂದೇಶದೊಂದಿಗೆ ಕಾರ್ಯಕ್ರಮವು ಅರ್ಥಪೂರ್ಣವಾಗಿ ನೆರವೇರಿತು.ಸತ್ಯ, ಶಾಂತಿ ಮತ್ತು ಸೇವೆಯ ಮಾರ್ಗವೇ ಶ್ರೇಷ್ಠ ಮಾರ್ಗ.

LEAVE A REPLY

Please enter your comment!
Please enter your name here