






ಶಿಶಿಲ: ಶಿಶಿಲ ಗ್ರಾಮದ ಒಟ್ಲ ಪ್ರದೇಶದಲ್ಲಿ ಕಾಡಾನೆಗಳ ದಾಳಿ ಮುಂದುವರಿದಿದ್ದು, ಕಳೆದ ರಾತ್ರಿ ಗದ್ದೆ ಹಾಗೂ ತೋಟಗಳಿಗೆ ನುಗ್ಗಿದ ಕಾಡಾನೆಗಳು ಕೃಷಿಯನ್ನು ನಾಶಪಡಿಸಿ ಅಪಾರ ಹಾನಿ ಉಂಟುಮಾಡಿವೆ.


ಈ ಭಾಗದಲ್ಲಿ ನಿರಂತರವಾಗಿ ನಡೆಯುತ್ತಿರುವ ಕಾಡಾನೆ ದಾಳಿಯಿಂದ ರೈತರು ಬೆಳೆ ಹಾನಿ ಅನುಭವಿಸುತ್ತಿದ್ದಾರೆ. ಕಳೆದ ರಾತ್ರಿಯೂ ಕಾಡಾನೆಗಳು ಗದ್ದೆ ಮತ್ತು ತೋಟಗಳಲ್ಲಿ ಬೆಳೆಗಳನ್ನು ತುಳಿದು ನಾಶಪಡಿಸಿದ್ದು, ರೈತರ ಶ್ರಮಕ್ಕೆ ತೀವ್ರ ಹೊಡೆತ ಬಿದ್ದಿದೆ.









