ಎಕ್ಸೆಲ್ ನಲ್ಲಿ ಗಾಂಧಿ ಜಯಂತಿ ಆಚರಣೆ

0

ಗುರುವಾಯನಕೆರೆ : ಎಕ್ಸೆಲ್ ಪದವಿ ಪೂರ್ವ ಕಾಲೇಜಿನಲ್ಲಿ ಮಹಾತ್ಮ ಗಾಂಧಿ ಹಾಗೂ ಲಾಲ್ ಬಹುದ್ದೂರ್ ಶಾಸ್ತ್ರಿ ಜಯಂತಿ ಪ್ರಯುಕ್ತ ವಿಶೇಷ ಕಾರ್ಯಕ್ರಮ ನಡೆಯಿತು.

ಗಾಂಧೀಜಿ ಹಾಗೂ ಶಾಸ್ತ್ರಿ ಅವರ ಭಾವಚಿತ್ರಗಳ ಮುಂದೆ ದೀಪ ಬೆಳಗಿ, ಪುಷ್ಪಾರ್ಚನೆ ಮಾಡಿ ಎಕ್ಸೆಲ್ ವಿದ್ಯಾ ಸಂಸ್ಥೆಗಳ ಆಡಳಿತ ಮಂಡಳಿಯ ಅಧ್ಯಕ್ಷರಾದ ಸುಮಂತ್ ಕುಮಾರ್ ಜೈನ್ ಅವರು ಮಾತನಾಡಿದರು. ಗಾಂಧೀಜಿ ಹಾಗೂ ಶಾಸ್ತ್ರೀಜಿ ಅವರ ಜೀವನದ ಸರಳತೆ,ಸತ್ಯ ಸಂದತೆ, ಆದರ್ಶಗಳನ್ನು ನಾವು ಪಾಲಿಸಬೇಕು. ಭಾರತದ ಇಂದಿನ ಬೆಳವಣಿಗೆಯ ಹಿಂದೆ ಇಂಥ ರಾಷ್ಟ್ರ ನಾಯಕರ ದೂರದೃಷ್ಟಿ ಇದೆ ಎಂದು ಹೇಳಿದರು.

ಪ್ರಾಂಶುಪಾಲರಾದ ಡಾ.ನವೀನ್ ಕುಮಾರ್ ಮರಿಕೆ, ವಾಣಿಜ್ಯ ವಿಭಾಗದ ಡೀನ್ ಸಂತೋಷ್ ಕೆ ಕೆ, ವಿಭಾಗದ ಮುಖ್ಯಸ್ಥರಾದ ಪ್ರಸನ್ನ ಭೋಜ, ಉಪನ್ಯಾಸಕರಾದ ಅರುಣ್ ಕ್ಯಾಸ್ಟೋಲಿನೊ, ಪವನ್ ರಾಜ್ , ನಿಲಯಪಾಲಕರು ಉಪಸ್ಥಿತರಿದ್ದರು. ಉಪನ್ಯಾಸಕಿ ಅನನ್ಯ ಜೈನ್ ನಿರೂಪಿಸಿ, ವಂದಿಸಿದರು.

LEAVE A REPLY

Please enter your comment!
Please enter your name here