







ಕುಂಭಶ್ರೀ ಆಂಗ್ಲ ಮಾಧ್ಯಮ ಶಾಲಾ ಕಾಲೇಜು, ನಿಟ್ಟಡೆ–ವೇಣೂರುನಲ್ಲಿ ಅ.02ರಂದು ಸಂಸ್ಥಾಪಕ ಗಿರೀಶ್ ಕೆ.ಹೆಚ್. ಅವರ ಮಾರ್ಗದರ್ಶನದಲ್ಲಿ ಗಾಂಧಿ ಜಯಂತಿಯನ್ನು ಆಚರಿಸಲಾಯಿತು.
ಗಾಂಧಿ ಜಯಂತಿಯ ದಿನದ ಮಹತ್ವದ ಕುರಿತು ಪ್ರಾಥಮಿಕ ಶಾಲಾ ಶಿಕ್ಷಕಿ ಸುಪ್ರಿತಾ ಮಾಹಿತಿ ನೀಡಿದರು. ಸಂಸ್ಥೆಯ ಸಂಚಾಲಕ ಅಶ್ವಿತ್ ಕುಲಾಲ್ ಮಹಾತ್ಮ ಗಾಂಧೀಜಿಯವರ ಜೀವನ ಮೌಲ್ಯಗಳು ಹಾಗೂ ಆದರ್ಶಗಳನ್ನು ಶಿಕ್ಷಕರಿಗೆ ಪರಿಚಯಿಸಿದರು.


ಈ ಕಾರ್ಯಕ್ರಮದಲ್ಲಿ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ಶ್ರೀನಿವಾಸ್ ನಾಯ್ಕ್ ಪ್ರೌಢಶಾಲಾ ವಿಭಾಗದ ಮುಖ್ಯ ಶಿಕ್ಷಕಿ ಮಮತಾ ಶಾಂತಿ, ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕ ಶುಭ ನಿತೇಶ್, ಪೂರ್ವ ಪ್ರಾಥಮಿಕ ವಿಭಾಗದ ಮುಖ್ಯ ಶಿಕ್ಷಕಿಯಾದ ಶೋಭಾ ಎಲ್.ಎನ್. ಹಾಗೂ ಎಲ್ಲಾ ಶಿಕ್ಷಕ ವೃಂದದವರು ಉಪಸ್ಥಿತರಿದ್ದರು.
ಕಾರ್ಯಕ್ರಮವನ್ನು ಗಣಿತ ಉಪನ್ಯಾಸಕ ಚಿಟ್ಟೆಸಾಬ್ ನಿರ್ವಹಿಸಿದರು.









