ಧರ್ಮಸ್ಥಳದಲ್ಲಿ 28ನೇ ವರ್ಷದ ಭಜನಾ ಕಮ್ಮಟ: ಸುತ್ತೂರು ಮಠದ ಶ್ರೀಗಳಿಂದ ಕಮ್ಮಟ ವೀಕ್ಷಣೆ,ಮೆಚ್ಚುಗೆ-ನಾಳೆ ಸಮಾರೋಪ

0

ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಸೆ. 28ರಿಂದ ನಡೆಯುತ್ತಿರುವ 28ನೇ ವರ್ಷದ ಭಜನಾ ಕಮ್ಮಟದ ಸಮಾರೋಪ ಸಮಾರಂಭ ನಾಳೆ (ಅ.4)ನಡೆಯಲಿದೆ.

ಸಮಾರೋಪ ಸಮಾರಂಭದ ಹಿನ್ನೆಲೆಯಲ್ಲಿ ಶನಿವಾರ ಮೈಸೂರಿನ ಸುತ್ತೂರು ಮಠದ ಶಿವರಾತ್ರಿ ದೇಶಿಕೇಂದ್ರ ಮಹಾಸ್ವಾಮೀಜಿಯವರು ಭಜನಾ ಕಮ್ಮಟಕ್ಕೆ ಭೇಟಿ ನೀಡಿ, ಶಿಬಿರಾರ್ಥಿಗಳಿಗೆ ನೀಡಲಾಗುತ್ತಿರುವ ಭಜನಾ ತರಬೇತಿಯನ್ನು ವೀಕ್ಷಿಸಿದರು.

ಈ ಸಂದರ್ಭದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಹಾಗೂ ಮಾಣಿಲದ ಮೋಹನದಾಸ ಪರಮಹಂಸ ಸ್ವಾಮೀಜಿಯವರು ಉಪಸ್ಥಿತರಿದ್ದರು.

ಶಿಬಿರಾರ್ಥಿಗಳಿಗೆ ಶಿಸ್ತುಬದ್ಧವಾಗಿ ಭಜನಾ ತರಬೇತಿ ನೀಡುತ್ತಿರುವುದನ್ನು ವೀಕ್ಷಿಸಿದ ಶಿವರಾತ್ರಿ ದೇಶಿಕೇಂದ್ರ ಮಹಾಸ್ವಾಮೀಜಿಯವರು ಮೆಚ್ಚುಗೆ ವ್ಯಕ್ತಪಡಿಸಿದರು.

LEAVE A REPLY

Please enter your comment!
Please enter your name here