ಬೆಳ್ತಂಗಡಿ ವಲಯ ಮಟ್ಟದ ಕ್ರೀಡಾಕೂಟ:ಸ್ಟಾರ್ ಲೈನ್ ವಿದ್ಯಾರ್ಥಿಗಳು ತಾಲೂಕು ಮಟ್ಟಕ್ಕೆ ಆಯ್ಕೆ

0

ನಡ : ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಬೆಳ್ತಂಗಡಿ ಹಾಗೂ ಸರಕಾರಿ ಪ್ರಾಥಮಿಕ |ಪ್ರಾಢಶಾಲೆ ನಾವೂರು ಶಾಲೆಯ ಸಂಯುಕ್ತ ಆಶ್ರಯದಲ್ಲಿ ಅಕ್ಟೋಬ‌ರ್ 2ರಂದು ನಡೆದ ವಲಯ ಮಟ್ಟದ ಕ್ರೀಡಾಕೂಟದಲ್ಲಿ ಸಂಸ್ಥೆಯ ವಿದ್ಯಾರ್ಥಿಗಳು ಭಾಗವಹಿಸಿದ್ದರು.

7ನೇ ತರಗತಿಯ ವಿದ್ಯಾರ್ಥಿ ಮೊಹಮ್ಮದ್ ತಶ್ರೀಫ್ ಇವರು 200 ಮೀ ಓಟದಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿ ಪ್ರಥಮ ಸ್ಥಾನವನ್ನು ಪಡೆದು ತಾಲೂಕು ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.ಮೊಹಮ್ಮದ್ ಶಝಿನ್ ಇವರು ಗುಂಡೆಸೆತದಲ್ಲಿ ದ್ವಿತೀಯ ಸ್ಥಾನ ಮತ್ತು ಹರ್ಡಲ್ಸ್ ನಲ್ಲಿ ಯಜ್ಞೆಶ್ ತೃತೀಯ ಸ್ಥಾನವನ್ನು ಪಡೆದುಕೊಂಡಿದ್ದಾರೆ.

ಇವರ ಸಾಧನೆಗೆ ಶಾಲಾ ಆಡಳಿತ ಮಂಡಳಿ, ಮುಖ್ಯಉಪಾಧ್ಯಾಯರು , ಮತ್ತು ಶಿಕ್ಷಕ ವೃಂದ ಅಭಿನಂದನೆಯನ್ನು ಸಲ್ಲಿಸಿದೆ.

LEAVE A REPLY

Please enter your comment!
Please enter your name here