ವಲಯ ಮಟ್ಟದ ಅಥ್ಲೆಟಿಕ್ಸ್ ನಲ್ಲಿ ಹೋಲಿ ರಿಡೀಮರ್ ಶಾಲೆಗೆ ಪ್ರಶಸ್ತಿ

0

ಬೆಳ್ತಂಗಡಿ ತಾಲೂಕು ಮಟ್ಟದ 14 ಮತ್ತು 17ರ ವಯೋಮಾನದ ಬಾಲಕ ಬಾಲಕಿಯರ ಅಥ್ಲೆಟಿಕ್ಸ್ ಕ್ರೀಡಾಕೂಟವು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ನಾವೂರಿನಲ್ಲಿ ಅಕ್ಟೋಬರ್ 2 ರಂದು ನಡೆಯಿತು. ಹೋಲಿ ರಿಡೀಮರ್ ಆಂಗ್ಲ ಮಾಧ್ಯಮ ಶಾಲೆ ಬೆಳ್ತಂಗಡಿಯ ವಿದ್ಯಾರ್ಥಿಗಳು ಉತ್ತಮ ಪ್ರದರ್ಶನ ನೀಡಿ ಹಲವು ಪ್ರಶಸ್ತಿಗಳನ್ನು ಪಡೆದಿದ್ದಾರೆ.

17 ರ ವಯೋಮಾನದ ಬಾಲಕರ ಗುಂಡೆಸೆತ ಸ್ಪರ್ಧೆಯಲ್ಲಿ ಮನ್ವಿತ್ (10ನೇ) ಪ್ರಥಮ ಸ್ಥಾನ ಮತ್ತು ಚಕ್ರ ಎಸೆತ ದ್ವಿತೀಯ ಸ್ಥಾನ, ಮಹಮ್ಮದ್ ಶಾಹಿಲ್(8ನೇ) ಎತ್ತರ ಜಿಗಿತದಲ್ಲಿ ಪ್ರಥಮ ಸ್ಥಾನ, 14ರ ವಯೋಮಾನದಲ್ಲಿ ತ್ರಿಶಾ ನಿಕೋಲ್ ಗೋವಿಯಸ್ (8ನೇ)ಉದ್ದ ಜಿಗಿತದಲ್ಲಿ ಪ್ರಥಮ ಸ್ಥಾನ ಎತ್ತರ ಜಿಗಿತದಲ್ಲಿ ದ್ವಿತೀಯ ಸ್ಥಾನ,‌ ಮಹಮ್ಮದ್ ಹಾಫಿಲ್ (8ನೇ) 80ಮೀ ಹರ್ಡಲ್ಸ್ ನಲ್ಲಿ ಪ್ರಥಮ ಸ್ಥಾನ ಮತ್ತು ಉದ್ದ ಜಿಗಿತದಲ್ಲಿ ತೃತೀಯ ಸ್ಥಾನ ಪಡೆದಿರುತ್ತಾರೆ. ದೈಹಿಕ ಶಿಕ್ಷಣ ಶಿಕ್ಷಕ ಶ್ರೀ ಸಂದೀಪ್ ತರಬೇತಿ ನೀಡಿದರು.

ಶಾಲಾ ಮುಖ್ಯೋಪಾಧ್ಯಾಯ ಫಾ ಕ್ಲಿಫರ್ಡ್ ಪಿಂಟೋರವರು ಅಭಿನಂದಿಸಿದರು.

LEAVE A REPLY

Please enter your comment!
Please enter your name here