ಕಕ್ಕಿಂಜೆ: ಮಾರ್ಗಮಧ್ಯೆ ಅಸ್ವಸ್ಥಗೊಂಡ ಮಹಿಳೆ: ಮಾನವೀಯತೆ ಮೆರೆದ ಕೆಎಸ್‌ಆರ್‌ಟಿಸಿ ಸಿಬ್ಬಂದಿ

0

ಕಕ್ಕಿಂಜೆ: ದಾವಣಗೆರೆಯಿಂದ ಮಂಗಳೂರಿಗೆ ತೆರಳುತ್ತಿದ್ದ ಕೆಎಸ್‌ಆರ್‌ಟಿಸಿ ಸರ್ಕಾರಿ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆಯೊಬ್ಬರು ಕಕ್ಕಿಂಜೆ ಸಮೀಪಿಸುತ್ತಿದ್ದಂತೆ ಏಕಾಏಕಿ ಅಸ್ವಸ್ಥಗೊಂಡು ಪ್ರಜ್ಞೆ ತಪ್ಪಿದ ಘಟನೆ ನಡೆದಿದೆ.

ಮಾತನಾಡಲು ಹಾಗೂ ದೇಹ ಚಲಿಸಲು ಸಾಧ್ಯವಾಗದ ಸ್ಥಿತಿಯಲ್ಲಿದ್ದ ಮಹಿಳೆಯ ಪರಿಸ್ಥಿತಿಯನ್ನು ಗಮನಿಸಿದ ಸಹ ಪ್ರಯಾಣಿಕರು ಕೂಡಲೇ ಚಾಲಕ ಮತ್ತು ನಿರ್ವಾಹಕರಿಗೆ ಮಾಹಿತಿ ನೀಡಿದ್ದಾರೆ.ಪರಿಸ್ಥಿತಿಯ ತೀವ್ರತೆಯನ್ನು ಅರಿತ ಬಸ್ ಚಾಲಕ ಕಿರಣ್ ಹಾಗೂ ನಿರ್ವಾಹಕ ಸಂತೋಷ್ ಸಂಗಪ್ಪ ಗೌಡ ಅವರು ನೇರವಾಗಿ ಬಸ್ ಅನ್ನು ಕಕ್ಕಿಂಜೆ ಶ್ರೀ ಕೃಷ್ಣ ಆಸ್ಪತ್ರೆಗೆ ಕೊಂಡೊಯ್ದು ಮಹಿಳೆಯನ್ನು ದಾಖಲಿಸಿ ಮಾನವೀಯತೆ ಮೆರೆದಿದ್ದಾರೆ.

ಈ ಸಂದರ್ಭದಲ್ಲಿ ಅಶ್ರಫ್ ಚಾರ್ಮಾಡಿ, ಫಾರೂಕ್ ಕಕ್ಕಿಂಜೆ ಗಾಂಧಿನಗರ ಹಾಗೂ ನೌಫಾಲ್ ಕಕ್ಕಿಂಜೆ ಗಾಂಧಿನಗರ ಅವರು ಮಹಿಳೆಗೆ ಅಗತ್ಯ ನೆರವು ನೀಡುವಲ್ಲಿ ಸಹಕರಿಸಿದ್ದಾರೆ.

LEAVE A REPLY

Please enter your comment!
Please enter your name here