ವೇಣೂರು, ಆರಂಬೋಡಿ ಗ್ರಾ.ಪಂ.ಗಳಿಗೆ ಆಡಳಿತಾಧಿಕಾರಿ ನೇಮಕ

0

ಬೆಳ್ತಂಗಡಿ: ತಾಲೂಕಿನ ವೇಣೂರು ಮತ್ತು ಅರಂಬೋಡಿ ಗ್ರಾಮ ಪಂಚಾಯತ್‌ಗಳ ಆಡಳಿತ ಮಂಡಳಿಯ ಅವಧಿ ಸೆ.29 ರಂದು ಮುಕ್ತಾಯವಾಗಿರುವ ಹಿನ್ನೆಲೆಯಲ್ಲಿ ಚುನಾವಣೆ ನಡೆಯುವವರೆಗೆ ಆಡಳಿತಾಧಿಕಾರಿಗಳನ್ನು ನೇಮಕ ಮಾಡಿ ದ.ಕ. ಜಿಲ್ಲಾಧಿಕಾರಿ ದರ್ಶನ್ ಹೆಚ್ ಸೆ.29ರಂದು ಆದೇಶ ಹೊರಡಿಸಿದ್ದಾರೆ.

ಈ ಪ್ರಕಾರ ವೇಣೂರು ಗ್ರಾಮ ಪಂಚಾಯತ್‌ಗೆ ಉಜಿರೆ ಮೆಸ್ಕಾಂ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರ ಮೋಹನ್ ಕುಮಾರ್ ಹಾಗೂಆರಂಬೋಡಿ ಗ್ರಾಮ ಪಂಚಾಯತ್‌ಗೆ ತಾಲೂಕು ದೈಹಿಕ ಶಿಕ್ಷಣ ಪರಿವೀಕ್ಷಣಾಧಿಕಾರಿ ಪ್ರಭಾಕರ್ ಎಸ್ ಅವರನ್ನು ನೇಮಕ ಮಾಡಲಾಗಿದೆ.

LEAVE A REPLY

Please enter your comment!
Please enter your name here