






ನಾವೂರು: ನಾವೂರು ಗ್ರಾಮದ ಸಾರ್ವಜನಿಕ ಬಂಧುಗಳಿಗೆ ಇವತ್ತಿನ ದಿನ ಅತ್ಯಂತ ನೋವಿನ ಸಂಗತಿ ನಡೆದಿದೆ ಎಂದು ನಾವೂರು ಶ್ರೀ ಗೋಪಾಲಕೃಷ್ಣ ದೇವಸ್ಥಾನದ ಅಧ್ಯಕ್ಷರು ಹೇಳಿಕೆ ನೀಡಿದ್ದಾರೆ.
ನಾವೂರು ಶ್ರೀ ಗೋಪಾಲಕೃಷ್ಣ ದೇವಸ್ಥಾನದಲ್ಲಿ ಧಾರ್ಮಿಕ ಭಾವನೆಯನ್ನು ಜನರಲ್ಲಿ ಮೂಡಿಸುವ ದೃಷ್ಟಿಯಿಂದ ಮತ್ತು ಎಲ್ಲಾ ಮಕ್ಕಳಿಗೆ ಭಗವದ್ಗೀತೆ, ವಿಷ್ಣು ಸಹಸ್ರನಾಮ ಪಠಣವನ್ನು ಕಲಿಸಿ, ದೇವಸ್ಥಾನದಲ್ಲಿ ಹಾಗೂ ಊರಿನಲ್ಲಿ ನಡೆಯುವ ಎಲ್ಲಾ ಧಾರ್ಮಿಕ ಕಾರ್ಯಕ್ರಮಗಳಲ್ಲಿ ಮುಂಚೂಣಿಯಲ್ಲಿ ನಿಂತು ಧರ್ಮ ಬೋಧನೆ ಮಾಡುತ್ತಿರುವ ಡಾ. ಪ್ರದೀಪ್ ಎ. ಅವರ ಆರೋಗ್ಯ ಕ್ಲಿನಿಕ್ ಗೆ ದುಷ್ಕರ್ಮಿಗಳು ಡೀಸೆಲ್ ಎರಚಿ ಬೆಂಕಿ ಇಟ್ಟಿರುವುದು ಅತ್ಯಂತ ಖಂಡನೀಯ ಕೃತ್ಯವಾಗಿದೆ.


ಇದು ಧಾರ್ಮಿಕ ಹಾಗೂ ಸಾಮಾಜಿಕವಾಗಿ ಒಳ್ಳೆಯ ಕೆಲಸ ಮಾಡುತ್ತಿರುವ ವ್ಯಕ್ತಿಯ ಮೇಲೆ ನಡೆದ ದಾಳಿಯಾಗಿದ್ದು, ಈ ದುಷ್ಕೃತ್ಯವನ್ನು ನಾವೂರು ಶ್ರೀ ಗೋಪಾಲಕೃಷ್ಣ ದೇವಸ್ಥಾನದ ವತಿಯಿಂದ ತೀವ್ರವಾಗಿ ಖಂಡಿಸುತ್ತೇವೆ.
ಈ ಕೃತ್ಯ ಎಸಗಿದ ದುಷ್ಕರ್ಮಿಗಳನ್ನು ಪೊಲೀಸ್ ಇಲಾಖೆಯವರು ಶೀಘ್ರದಲ್ಲೇ ಪತ್ತೆಹಚ್ಚಿ ಬಂಧಿಸಬೇಕು ಎಂದು ನಾವೂರು ಶ್ರೀ ಗೋಪಾಲಕೃಷ್ಣ ದೇವಸ್ಥಾನದ ಅಧ್ಯಕ್ಷ ಹರೀಶ್ ಸಾಲಿಯಾನ್ ತಿಳಿಸಿದ್ದಾರೆ.









