ಡಾ. ಪ್ರದೀಪ್ ಆರೋಗ್ಯ ಕ್ಲಿನಿಕ್ ಮೇಲೆ ಬೆಂಕಿ ಹಚ್ಚಿದ ಕಿಡಿಗೇಡಿಗಳ ಕೃತ್ಯಕ್ಕೆ ಗೌರವ್ ಸೂರ್ಯ​ ಖಂಡನೆ

0

ಬೆಳ್ತಂಗಡಿ: ಸಮಾಜಕ್ಕೆ ನಿರಂತರವಾಗಿ ಆರೋಗ್ಯ ಸೇವೆಗಳನ್ನು ನೀಡುತ್ತಾ ದಾರಿದೀಪವಾಗಿರುವ ಡಾ. ಪ್ರದೀಪ್ ಅವರ ಆರೋಗ್ಯ ಕ್ಲಿನಿಕ್‌ಗೆ ಕಿಡಿಗೇಡಿಗಳು ಬೆಂಕಿ ಹಚ್ಚಿ ವಿಕೃತಿ ಮೆರೆದಿರುವ ಹೇಯ ಕೃತ್ಯವನ್ನು ವಿಶ್ವ ಹಿಂದೂ ಪರಿಷತ್ ಬಜರಂಗದಳದ ಬೆಳ್ತಂಗಡಿ ಸಹ ಸಂಯೋಜಕರಾದ ಗೌರವ್ ಸೂರ್ಯ ಅವರು ಅತ್ಯಂತ ಉಗ್ರವಾಗಿ ಖಂಡಿಸಿದ್ದಾರೆ.

​ಈ ಘಟನೆಯ ಕುರಿತು ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಅವರು, “ಈ ಕೃತ್ಯದ ಹಿಂದೆ ಯಾರ ಕೈವಾಡವಿದೆಯೋ ಅವರನ್ನು ಆದಷ್ಟು ಬೇಗ ಪತ್ತೆಹಚ್ಚಿ, ಸೂಕ್ತ ಕಾನೂನು ರೀತ್ಯ ಕಠಿಣ ಕ್ರಮ ಕೈಗೊಳ್ಳಬೇಕು” ಎಂದು ಆಗ್ರಹಿಸಿದ್ದಾರೆ. ಅಲ್ಲದೆ, ವೈದ್ಯ ಡಾ. ಪ್ರದೀಪ್ ಅವರಿಗೆ ನಮ್ಮೆಲ್ಲರ ಸಂಪೂರ್ಣ ಬೆಂಬಲ ಹಾಗೂ ಸಹಕಾರ ಇರುತ್ತದೆ ಎಂದು ಭರವಸೆ ನೀಡಿದ್ದಾರೆ.

LEAVE A REPLY

Please enter your comment!
Please enter your name here