ಬಳಂಜ ಶಾಲೆಯಲ್ಲಿ ಗುರುದೇವ ಪ.ಪೂ. ಕಾಲೇಜಿನ ಎನ್.ಎಸ್.ಎಸ್. ಶಿಬಿರ ಉದ್ಘಾಟನೆವಿದ್ಯಾರ್ಥಿಗಳು ಉನ್ನತ ಮಟ್ಟದಲ್ಲಿ ಬೆಳೆಯಬೇಕು: ವಸಂತ ಸಾಲಿಯಾನ್: ವಿದ್ಯಾರ್ಥಿಗಳು ಜೀವನ ಪಾಠ ಕಳಿಯಬೇಕು: ಪ್ರೀತಿತಾ ಬಂಗೇರ

0

ಬಳಂಜ: ವಿದ್ಯಾರ್ಥಿಗಳು ಸಮಾಜದಲ್ಲಿ ಉನ್ನತ ಮಟ್ಟದಲ್ಲಿ ಬೆಳೆಯಬೇಕು.ಹಾಗಾಗಿ ವಿದ್ಯಾರ್ಥಿಗಳು ಶಿಬಿರದಲ್ಲಿ ಜೀವನ ಪಾಠ ಕಳಿಯಬೇಕು ಎಂದು ಕೆ‌.ವಸಂತ ಸಾಲಿಯಾನ್ ಹೇಳಿದರು.ಅವರು ಅ 8 ರಂದು ಬೆಳ್ತಂಗಡಿ ಶ್ರೀ ಗುರುದೇವ ಪದವಿ ಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ಶಿಬಿರವನ್ನು ಬಳಂಜ ಶಾಲೆಯಲ್ಲಿ ಉದ್ಘಾಟಿಸಿ ಮಾತನಾಡಿದರು.

ಶ್ರೀ ಗುರುದೇವ ಎಜುಕೇಶನಲ್ ಟ್ರಸ್ಟ್ ಅಧ್ಯಕ್ಷೆ ಪ್ರೀತಿತ ಧರ್ಮವಿಜೇತ್ ಸಮಾರಂಭದ ಅಧ್ಯಕ್ಷತೆ jವಹಿಸಿ ಬಳಂಜ ಶಾಲೆಯಲ್ಲಿ ನಮ್ಮ ಮಕ್ಕಳ ಶಿಬಿರ ನಡೆಸಲು ಅವಕಾಶ ಕಲ್ಪಿಸಿದ ಎಲ್ಲರಿಗೂ ವಂದನೆಗಳು.ಒಂದು ವಾರದಲ್ಲಿ ವಿದ್ಯಾರ್ಥಿಗಳು ಬದುಕಿನ ಮೌಲ್ಯಗಳನ್ನು ಕಲಿಯಬೇಕು ಎಂದರು‌ವೇದಿಕೆಯಲ್ಲಿ ಬಳಂಜ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಶಶಿಕಲಾ, ಬಳಂಜ ಶಾಲಾ ಶಿಕ್ಷಣ ಟ್ರಸ್ಟ್ ಅಧ್ಯಕ್ಷ ಮನೋಹರ್ ಬಳಂಜ, ಶಾಲಾ ಅಮೃತ ಮಹೋತ್ಸವ ಸಮಿತಿ ಅಧ್ಯಕ್ಷ ಚಂದ್ರಶೇಖರ ಪಿ.ಕೆ. , ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿ ಅಧ್ಯಕ್ಷ ಸಂತೋಷ್ ಪಿ ಕೋಟ್ಯಾನ್, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ತೋಟಗಾರಿಕಾ ಉತ್ಪಾದಕರ ಸಹಕಾರ ಮಾರುಕಟ್ಟೆ ಮತ್ತು ಸಂಸ್ಕರಣಾ ಸೊಸೈಟಿ ನಿರ್ದೇಶಕ ರತ್ನರಾಜ ಜೈನ್,ಗ್ರಾಮ ಪಂಚಾಯತ್ ಮಾಜಿ ಸದಸ್ಯ ರವೀಂದ್ರ ಬಿ ಅಮೀನ್, ನಾರಾವಿ ಗ್ರಾಮ ಪಂಚಾಯತ್ ಮಾಜಿ ಸದಸ್ಯ ಉದಯ ಹೆಗ್ಡೆ, ನಾರಾವಿ ಜನಸೇವಾ ಟ್ರಸ್ಟ್ ಅಧ್ಯಕ್ಷ ಅಭಿಜಿತ್ ಜೈನ್, ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ರತ್ನಾಕರ ಪೂಜಾರಿ,ಶ್ರೀ ಗುರುದೇವ ಪದವಿ ಪೂರ್ವ ಕಾಲೇಜಿನ ಪ್ರಾಂಶಪಾಲ ಸುಕೇಶ್ ಕುಮಾರ್ ಕೆ, ಉಪಸ್ಥಿತರಿದ್ದರು.

ಉಪನ್ಯಾಸಕ ಗಣೇಶ್ ಬಿ. ಶಿರ್ಲಾಲು ಸ್ವಾಗತಿಸಿದರು‌.ಉಪ ಪ್ರಾಂಶುಪಾಲ ಬಿ.ಎ. ಶಮೀವುಲ್ಲಾ ಪ್ರಾಸ್ತಾವಿಕ ಮಾತುಗಳನ್ನಾಡಿದರು.ವಿದ್ಯಾರ್ಥಿಗಳು ಮತ್ತು ಉಪನ್ಯಾಸಕರು, ಪೋಷಕರು ಸಹಕರಿಸಿದರು.

LEAVE A REPLY

Please enter your comment!
Please enter your name here