






ಬೆಳ್ತಂಗಡಿ : ಮಲವಂತಿಗೆ ಗ್ರಾಮದ ಚಾರಣ ಪ್ರಸಿದ್ಧ ದಿಡುಪೆ ಫಾಲ್ಸ್ ಗೆ ಆನೆ ಸಂಚಾರ ಹೆಚ್ಚಾಗಿರುವುದರಿಂದ ಮುಂಜಾಗ್ರತಾ ಕ್ರಮವಾಗಿ ಅರಣ್ಯ ಇಲಾಖೆಯಿಂದ ನಾಳೆಯಿಂದ ನಿರ್ಬಂಧ ವಿಧಿಸಲಾಗಿದೆ.


ಮುಂದಿನ ಆದೇಶ ಬರುವವರೆಗೆ ದಿಡುಪೆ ಫಾಲ್ಸ್ ವೀಕ್ಷಣೆಗೆ ಲಭ್ಯವಿಲ್ಲ ಎಂದು ವನ್ಯಜೀವಿ ವಲಯ ಅರಣ್ಯಾಧಿಕಾರಿ ಶರ್ಮಿಷ್ಟಾ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.









