






ನಾವೂರು:ನಾವೂರಿನ ಡಾ. ಪ್ರದೀಪ್ ಅವರ ಆರೋಗ್ಯ ಕ್ಲಿನಿಕ್ ನಾವೂರು ಇಲ್ಲಿಗೆ ತಾ. 06-10-2026 ರಂದು ರಾತ್ರಿ ಕಿಡಿಗೇಡಿಗಳು ಬೆಂಕಿ ಹಚ್ಚಿರುವ ವಿಷಯದ ಬಗ್ಗೆ ತಪ್ಪು ಮಾಡಿರುವ ವ್ಯಕ್ತಿಗಳು ಆದಷ್ಟು ಬೇಗನೆ ಸಿಗುವಂತಾಗಲಿ ಎಂದು ಗ್ರಾಮದೈವ ಶ್ರೀ ಕೊಡಮಣಿತ್ತಾಯ ಮತ್ತು ಸಹಪರಿವಾರ ದೈವಗಳ ದೈವಸ್ಥಾನದಲ್ಲಿ ವಿಶೇಷ ಪ್ರಾರ್ಥನೆ ಮತ್ತು ಖಂಡನಾ ಸಭೆ ಕರೆಯಲಾಗಿದೆ.


ದೈವ ಕ್ಷೇತ್ರ ಬಡೆಕ್ಕಾವು ಗುತ್ತು ಚಾರಿಟೇಬಲ್ ಟ್ರಸ್ಟ್ ನಾವೂರು, ಬೆಳ್ತಂಗಡಿ ತಾಲೂಕು ಇದರ ವತಿಯಿಂದ ಅ.11 ರಂದು ಬೆಳಿಗ್ಗೆ 8:00 ಗಂಟೆಗೆ ಗ್ರಾಮದೈವ ಶ್ರೀ ಕೊಡಮಣಿತ್ತಾಯ ದೈವಸ್ಥಾನ ಬಡೆಕ್ಕಾವು ಗುತ್ತು ಇಲ್ಲಿ ವಿಶೇಷ ಪ್ರಾರ್ಥನೆ ಮತ್ತು ಇಂತಹ ಹೇಯ ಕೃತ್ಯವನ್ನು ಖಂಡಿಸುವ ಸಭೆಯನ್ನು ಕರೆಯಲಾಗಿದೆ.ಭಕ್ತಾದಿಗಳು ಅತೀ ಹೆಚ್ಚಿನ ಸಂಖ್ಯೆಯಲ್ಲಿ ಬಂದು ಪ್ರಾರ್ಥನೆಯಲ್ಲಿ ಭಾಗವಹಿಸಿ, ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ಗುರುಪಡಿಸುವಂತಾಗಲಿ ಎಂದು ಪ್ರಾರ್ಥಿಸುವಂತೆ ದೈವ ಕ್ಷೇತ್ರ ಬಡೆಕ್ಕಾವು ಗುತ್ತು ಮನೆಯವರು, ಊರಿನ ಗುತ್ತು ಬರ್ಕೆಯವರು, ದೈವಗಳ ಪರಿಚಾರಕರು, ವಿಲಯದವರು ಮತ್ತು ಗ್ರಾಮದ ಹತ್ತು ಸಮಸ್ತರು ಪ್ರಕಟಣೆಯಲ್ಲಿ ಕೋರಿದ್ದಾರೆ.









