ಲಾಯಿಲ: ತಾಲೂಕು ಮಟ್ಟದ ಶಟಲ್ ಬ್ಯಾಡ್ಮಿಂಟನ್ ಕ್ರೀಡಾಕೂಟದ ಉದ್ಘಾಟನೆ

0

ಸಾರ್ವಜನಿಕ ಶಿಕ್ಷಣ ಇಲಾಖೆ (ಪದವಿಪೂರ್ವ) ಹಾಗೂ ಮುಂಡಾಜೆ ಪದವಿ ಪೂರ್ವ ಕಾಲೇಜು ಮುಂಡಾಜೆ ಇದರ ಸಹಯೋಗದಲ್ಲಿ ತಾಲೂಕು ಮಟ್ಟದ ಶಟಲ್ ಬ್ಯಾಡ್ಮಿಂಟನ್ ಕ್ರೀಡಾಕೂಟದ ಉದ್ಘಾಟನೆಯು ಲಾಯಿಲ ಗ್ರಾಮದ ಕಾಶಿಬೆಟ್ಟಿನಲ್ಲಿರುವ ರೋಟರಿ ಭವನದಲ್ಲಿ ಜರುಗಿತು.

ವಿವೇಕಾನಂದ ಶಿಕ್ಷಣ ಸಂಸ್ಥೆಗಳು ಮುಂಡಾಜೆ ಇದರ ಅಧ್ಯಕ್ಷರಾದ ವಿನಯಚಂದ್ರ ಇವರು ದೀಪ ಪ್ರಜ್ವಲಿಸುವ ಮೂಲಕ ಕ್ರೀಡಾಕೂಟದ ಉದ್ಘಾಟನೆಯನ್ನು ನೆರವೇರಿಸಿ ಶುಭ ಹಾರೈಸಿದರು.ಮುಂಡಾಜೆ ಶಿಕ್ಷಣ ಸಂಸ್ಥೆಗಳ ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ಕಜೆ ವೆಂಕಟೇಶ ಭಟ್, ಮುಖ್ಯ ಅತಿಥಿಗಳಾಗಿ ರೋಟರಿ ಕ್ಲಬ್ ಬೆಳ್ತಂಗಡಿ ಇದರ ಉಪಾಧ್ಯಕ್ಷರಾದ ರಾಜೇಶ್ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಕಾಲೇಜಿನ ಪ್ರಾಂಶುಪಾಲರಾದ ಗೀತಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು. ಉದ್ಘಾಟನಾ ಕಾರ್ಯಕ್ರಮವನ್ನು ದೈಹಿಕ ಶಿಕ್ಷಣ ಶಿಕ್ಷಕರುಗಳಾರಾದ ಗುಣಪಾಲ್ ಎಂ ಎಸ್ ನಿರೂಪಿಸಿ, ಸಂದೀಪ್ ಐ ಸ್ವಾಗತಿಸಿ, ಬಾಲಕೃಷ್ಣ ಧನ್ಯವಾದಗೈದರು.ಕಾಲೇಜಿನ ಕಚೇರಿ ಸಿಬ್ಬಂದಿಗಳಾದ ಜನಾರ್ಧನ ಹಾಗೂ ಯೋಗೀಶ್ ಸಹಕರಿಸಿದರು.

LEAVE A REPLY

Please enter your comment!
Please enter your name here