ಮುಂಡಾಜೆ: ಎನ್ ಎಸ್ ಎಸ್ ವಾರ್ಷಿಕ ವಿಶೇಷ ಶಿಬಿರದ ಸಮಾರೋಪ ಸಮಾರಂಭ

0

“ಜೀವನದಲ್ಲಿ ಎದುರಾಗುವ ಅಡೆತಡೆಗಳನ್ನು ಎದುರಿಸಿ ನಿವಾರಿಸಲು, ತಮ್ಮ ಸಾಮರ್ಥ್ಯವನ್ನು ಪ್ರಸ್ತುತಪಡಿಸಲು ಎನ್ಎಸ್ಎಸ್ ಸೂಕ್ತ ವೇದಿಕೆಯಾಗಿದೆ. ವಿದ್ಯಾರ್ಥಿಗಳಿಗೆ ಸ್ವಾವಲಂಬಿ ಬದುಕು ಕಟ್ಟಿಕೊಳ್ಳಲು ಅಗತ್ಯವಾದ ಜೀವನ ಪಾಠವನ್ನು ಕಲಿಸುತ್ತದೆ” ಎಂದು ಬೆಳ್ತಂಗಡಿ ಸುದ್ದಿ ವಾಹಿನಿಯ ಮುಖ್ಯಸ್ಥರಾದ ದಾಮೋದರ ದೊಂಡೋಲೆಯವರು ಹೇಳಿದರು.

ಅವರು ಶ್ರೀ ಕ್ಷೇತ್ರ ಮತ್ತೂರು ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ನಡೆದ ಮುಂಡಾಜೆ ಪದವಿ ಪೂರ್ವ ಕಾಲೇಜು ಮುಂಡಾಜೆ ಇದರ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ವಿಶೇಷ ಶಿಬಿರದ ಸಮಾರೋಪ ಭಾಷಣದಲ್ಲಿ ಮಾತನಾಡಿದರು. ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿದ್ದ ವಿವೇಕಾನಂದ ಶಿಕ್ಷಣ ಸಂಸ್ಥೆಗಳು ಮುಂಡಾಜೆಯ ಅಧ್ಯಕ್ಷರಾದ ವಿನಯಚಂದ್ರರವರು ಮಾತನಾಡಿ, ‘ಎನ್ಎಸ್ಎಸ್ ಶಿಬಿರಾರ್ಥಿಗಳು ಪಂಚ ಪರಿವರ್ತನೆಯ ಮೂಲಕ ಸಮಾಜಕ್ಕೆ ಮಾದರಿಯಾಗಲಿ’ ಎಂದರು.

ಚಾರ್ಮಾಡಿ ಗ್ರಾಮ ಪಂಚಾಯಿತಿಯ ಮಾಜಿ ಅಧ್ಯಕ್ಷೆ ಶಾರದ ಎ, ಹಾಲು ಉತ್ಪಾದಕರ ಸಹಕಾರಿ ಸಂಘ ಚಾರ್ಮಾಡಿಯ ಅಧ್ಯಕ್ಷ ಚಂದ್ರೇಗೌಡ ಅಂತರ, ವಿವೇಕಾನಂದ ಶಿಕ್ಷಣ ಸಂಸ್ಥೆಗಳು ಮುಂಡಾಜೆಯ ಸದಸ್ಯ ಹಾಗೂ ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ಮಾಜಿ ಅಧ್ಯಕ್ಷರಾದ ಪ್ರಕಾಶ್ ಹೊಸಮಠ ಇವರು ಮಾತನಾಡಿದರು.

ದೇವಸ್ಥಾನದ ಮೊಕ್ತೇಸರು ಹಾಗೂ ಶಿಬಿರ ನಿರ್ವಹಣಾ ಸಮಿತಿಯ ಗೌರವಾಧ್ಯಕ್ಷರಾದ ಯಶೋಧರ ವಳಸರಿ, ಸಹಮೊಕ್ತೇಸರರು ಹಾಗೂ ಶಿಬಿರ ನಿರ್ವಹಣಾ ಸಮಿತಿಯ ಅಧ್ಯಕ್ಷೆ ಪ್ರಿಯಾ ಹರೀಶ್, ಜೊತೆ ಕಾರ್ಯದರ್ಶಿ ಅಭಿಷೇಕ್ ಇವರು ಊರವರ ಪರವಾಗಿ ಅನಿಸಿಕೆಗಳನ್ನು ವ್ಯಕ್ತಪಡಿಸಿದರು. ಮುಂಡಾಜೆ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲೆ ಗೀತಾ, ಮತ್ತೂರು ಪಂಚಲಿಂಗೇಶ್ವರ ದೇವಸ್ಥಾನದ ಸಹಮೊಕ್ತೇಸರ ಹಾಗೂ ಶಿಬಿರ ನಿರ್ವಹಣಾ ಸಮಿತಿಯ ಉಪಾಧ್ಯಕ್ಷ ಕಿಶೋರ್ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಶಿಬಿರಾರ್ಥಿಗಳಾದ ಶಿಥಿಲ್, ಲಾವಣ್ಯ, ಜನೀಕ್ಷಾ ತಮ್ಮ ಅನಿಸಿಕೆಗಳನ್ನು ವ್ಯಕ್ತಪಡಿಸಿದರು. ಕಾರ್ಯಕ್ರಮಾಧಿಕಾರಿ ನಮಿತಾ ಕೆ ಆರ್ ಶಿಬಿರದ ವರದಿ ವಾಚಿಸಿದರು. ಶಿಬಿರದ ಅಂಗವಾಗಿ ಕಾರ್ಯಕ್ರಮಾಧಿಕಾರಿ, ಅಡುಗೆ ತಯಾರಕರಾದ ಪಾಂಡಿರಾಜ ಜೈನ್ ಮತ್ತು ಜಗತ್ ಇವರನ್ನು ಗೌರವಿಸಲಾಯಿತು. ಶಿಬಿರಾರ್ಥಿಗಳ ಪ್ರಾರ್ಥನೆಯೊಂದಿಗೆ ಆರಂಭವಾದ ಕಾರ್ಯಕ್ರಮವನ್ನು ಕಾಲೇಜಿನ ಹಿರಿಯ ಉಪನ್ಯಾಸಕರಾದ ಪುರುಷೋತ್ತಮ ಶೆಟ್ಟಿ ನಿರೂಪಿಸಿದರು.

ವಾಣಿಜ್ಯಶಾಸ್ತ್ರ ಉಪನ್ಯಾಸಕರಾದ ಪದ್ಮನಾಭ ಬಿ ಕೆ ಸ್ವಾಗತಿಸಿ, ಹಿರಿಯ ವಿದ್ಯಾರ್ಥಿನಿ ಆಶಾಲತಾ ಶಿಬಿರಕ್ಕೆ ಸಹಕರಿಸಿದ ಸರ್ವರಿಗೂ ಧನ್ಯವಾದಗೈದರು. ಕಾಲೇಜಿನ ಬೋಧಕ ಬೋಧಕೇತರ ವರ್ಗದವರು ಸಹಕರಿಸಿದರು. ಶಿಬಿರಾರ್ಥಿಗಳು, ದೇವಸ್ಥಾನದ ಆಡಳಿತ ವರ್ಗ ಮತ್ತು ಊರವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here