ಕೊಯ್ಯೂರು ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ನಗರ ಸ್ವಚ್ಛತೆ ಕಾರ್ಯಕ್ರಮ

0

ಕೊಯ್ಯೂರು: ಸರ್ಕಾರಿ ಪದವಿಪೂರ್ವ ಕಾಲೇಜು ಮತ್ತು ಕೊಯ್ಯೂರು ಗ್ರಾಮ ಪಂಚಾಯತ್ ಸಹಯೋಗದಲ್ಲಿ ಸ್ವಚ್ಛತಾ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.

ಕಾಲೇಜಿನ ಆವರಣದಿಂದ ಆದೂರು-ಪೆರಾಲ್ ಪೇಟೆಯವರೆಗೆ ಸ್ವಚ್ಛತಾ ಹಿ ಸೇವಾ’ ಅಭಿಯಾನದ ಅಂಗವಾಗಿ ಬೀದಿ ಸ್ವಚ್ಛಗೊಳಿಸಲಾಯಿತು.ಈ ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯತ್ ಸಿಬ್ಬಂದಿ ವರ್ಗದವರು, ಮಾಜಿ ಸದಸ್ಯ ಯಶವಂತ ಗೌಡ, ದಿವ್ಯ, ಕಾಲೇಜು ಉಪನ್ಯಾಸಕರಾದ ಲಕ್ಷ್ಮಣ ಗೌಡ, ಭವ್ಯ, ಸಂತೋಷ್ ಕುಮಾರ್ ಹಾಗೂ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.ಇದೇ ಸಂದರ್ಭದಲ್ಲಿ ಕೊಯ್ಯೂರು ಘನತ್ಯಾಜ್ಯ ಘಟಕಕ್ಕೆ ಭೇಟಿ ನೀಡಲಾಯಿತು.

ತ್ಯಾಜ್ಯ ನಿರ್ವಹಣೆ ಮತ್ತು ಪಂಚಾಯತ್ ಕಾರ್ಯವೈಖರಿ ಬಗ್ಗೆ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಪರಮೇಶ್ವರ ಅವರು ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು.

ಕಾಲೇಜು ಪ್ರಾಂಶುಪಾಲರಾದ ಮೋಹನ ಗೌಡ ಅವರು ಸಹಕರಿಸಿದ ಎಲ್ಲರಿಗೂ ಧನ್ಯವಾದ ಸಲ್ಲಿಸಿದರು.

LEAVE A REPLY

Please enter your comment!
Please enter your name here