






ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಬಿ.ಎಡ್. ಮತ್ತು ಡಿ.ಎಡ್. ಕಾಲೇಜಿನಲ್ಲಿ ಡಾ ಡಿ. ವೀರೇಂದ್ರ ಹೆಗ್ಗಡೆಯವರ ಪಟ್ಟಾಭಿಷೇಕದ 59 ನೇ ವರ್ಧಂತ್ಯುತ್ಸವದ ಪ್ರಯುಕ್ತ ಆರ್ಥಿಕ ಸಾಕ್ಷರತೆ ಹಾಗೂ ಹಣಕಾಸು ನಿರ್ವಹಣೆ ಎಂಬ ವಿಷಯದಲ್ಲಿ ಅತಿಥಿ ಉಪನ್ಯಾಸ ಕಾರ್ಯಕ್ರಮವು ನಡೆಯಿತು.
ಬೆಳ್ತಂಗಡಿ ತಾಲೂಕು ಪಂಚಾಯತ್ನ ಆರ್ಥಿಕ ಸಾಕ್ಷರತಾ ಕೇಂದ್ರದ ಸಂಪನ್ಮೂಲ ವ್ಯಕ್ತಿ ಹಾಗೂ ಉಪನ್ಯಾಸಕಿ ಉಷಾ ನಾಯಕ್ ಅವರು ಮುಖ್ಯ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ


“ಆರ್ಥಿಕವಾಗಿ ಸಬಲೀಕರಣಗೊಳ್ಳಲು ಉಳಿತಾಯದ ಜೊತೆಗೆ ದಿನನಿತ್ಯದ ಜೀವನದಲ್ಲಿ ಹಣಕಾಸಿನ ಬಳಕೆ ಹಾಗೂ ನಿರ್ವಹಣೆಯ ಬಗ್ಗೆ ಸರಿಯಾದ ಮಾಹಿತಿಯನ್ನು ನೀಡಿದರು. ಅಂಚೆ ಕಚೇರಿ, ರಾಷ್ಟಿçÃಕೃತ ಬ್ಯಾಂಕುಗಳ ಮೂಲಕ ದೊರೆಯುವ ವಿವಿಧ ಉಳಿತಾಯ ಯೋಜನೆ, ಹೂಡಿಕೆ ಹಾಗೂ ಸೌಲಭ್ಯಗಳಾದ ಕೆನರಾ ಬ್ಯಾಂಕ್ ಏಂಜಲ್ ಉಳಿತಾಯ ಖಾತೆಯ ಬಗ್ಗೆ ಮಾಹಿತಿ ನೀಡಿದರು. ಜೊತೆಗೆ ಹೆಚ್ಚುತ್ತಿರುವ ಸೈಬರ್ ಅಪರಾಧಗಳು ಹಾಗೂ ಹಣಕಾಸಿನ ವಂಚನೆ, ಈ ರೀತಿಯ ವಂಚನೆ ಗೊಳಗಾದಾಗ ವಹಿಸಬೇಕಾದ ಮುನ್ನೆಚ್ಚರಿಕಾ ಕ್ರಮಗಳನ್ನು ವಿದ್ಯಾರ್ಥಿಗಳೊಂದಿಗೆ ಚರ್ಚಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲ ಡಾ ಸಂತೋಷ್ ಆಲ್ಬರ್ಟ್ ಸಲ್ಡಾನ ವಹಿಸಿ ಕುಟುಂಬದ ಆರ್ಥಿಕ ಸಬಲೀಕರಣದಲ್ಲಿ ಮಹಿಳೆಯ ಪ್ರಾಮುಖ್ಯತೆ ಹಾಗೂ ಸಮರ್ಪಕ ವಿತ್ತೀಯ ನಿರ್ವಹಣೆ ಮತ್ತು ಉಳಿತಾಯದ ಅವಶ್ಯಕತೆಯ ಕುರಿತು ತಿಳಿಸಿದರು.ಕಾರ್ಯಕ್ರಮದ ವೇದಿಕೆಯಲ್ಲಿ ಬಿ.ಎಡ್. ಮತ್ತು ಡಿ.ಎಡ್. ಕಾಲೇಜಿನ ವಿದ್ಯಾರ್ಥಿ ನಾಯಕಿಯರಾದ ಶ್ರವಣ ಮಹಾಪುರುಷ ಮತ್ತು ಧನುಶ್ರೀ ಉಪಸ್ಥಿತರಿದ್ದರು.
ಪ್ರಶಿಕ್ಷಣಾರ್ಥಿಗಳಾದ ಸಾಯಿಧೃತಿ ಮತ್ತು ಬಳಗ ಪ್ರಾರ್ಥಿಸಿ, ವರ್ಷ ಪಿ ಆರ್ ಸ್ವಾಗತಿಸಿ, ಹೇಮಲತಾ ಬಿ ಸಿ ವಂದಿಸಿ, ವರ್ಷಿತ ಕಾರ್ಯಕ್ರಮ ನಿರೂಪಿಸಿದರು.









