ನಾವೂರು ಕ್ಲಿನಿಕ್‌ಗೆ ಬೆಂಕಿ ಪ್ರಕರಣ: ಮೂವರು ಆರೋಪಿಗಳ ಬಂಧನ, ನ್ಯಾಯಾಲಯಕ್ಕೆ ಹಾಜರು

0

ನಾವೂರು ಅ.15: ನಡ ಗ್ರಾಮ ನಿವಾಸಿ ಡಾ. ಪ್ರದೀಪ ಎ. (51) ಅವರು ನಾವೂರಿನ ಸ್ವಾತಿ ಕಟ್ಟಡದಲ್ಲಿ ನಡೆಸುತ್ತಿದ್ದ ಆರೋಗ್ಯ ಕ್ಲಿನಿಕ್‌ಗೆ ಅ.6 ರಂದು ರಾತ್ರಿ ದುಷ್ಕರ್ಮಿಗಳು ಡೀಸೆಲ್ ಸುರಿದು ಬೆಂಕಿ ಹಚ್ಚಿದ ಪರಿಣಾಮ ಔಷಧಿ ಹಾಗೂ ವೈದ್ಯಕೀಯ ಸಲಕರಣೆಗಳು ಸೇರಿದಂತೆ ಅಂದಾಜು 2 ರಿಂದ 3 ಲಕ್ಷ ರೂ. ಮೌಲ್ಯದ ಸೊತ್ತುಗಳು ಸುಟ್ಟುಹೋದ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಳ್ತಂಗಡಿ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ.

ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಅ.ಕ್ರ 112/2026 ಕಲಂ 326(f), 326(G), 324(5) BNS 2023 ರಂತೆ ಪ್ರಕರಣ ದಾಖಲಾಗಿತ್ತು. ಈ ಪ್ರಕರಣದ ತನಿಖೆ ನಡೆಸಿದ ಪೊಲೀಸರು ಆರೋಪಿಗಳಾದ ನಾವೂರು ನಿವಾಸಿಗಳಾದ ರವಿ ಕುಮಾರ್ (31), ಸುರೇಶ್ ಪಿ.ಎನ್ (44) ಮತ್ತು ದಿನೇಶ್ ಪ್ರಭು (51)ಎಂಬ ಮೂವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ ಎಂದು ದ.ಕ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಮಾಹಿತಿ ನೀಡಿದ್ದಾರೆ.ಈ ಕೃತ್ಯವನ್ನು ಶಾಸಕ ಹರೀಶ್ ಪೂಂಜ, ವಿಶ್ವ ಹಿಂದೂ ಪರಿಷತ್ – ಬಜರಂಗದಳ ಬೆಳ್ತಂಗಡಿ ಪ್ರಖಂಡ ಸೇರಿದಂತೆ ವಿವಿಧ ಸಂಘಟನೆಗಳು, ವೈದ್ಯರು ಖಂಡಿಸಿ ಆರೋಪಿಗಳ ಶೀಘ್ರ ಬಂಧನಕ್ಕೆ ಆಗ್ರಹಿಸಿದ್ದರು.

ಘಟನಾ ಸ್ಥಳಕ್ಕೆ ಹೆಚ್ಚುವರಿ ಎಸ್ಪಿ ಅನಿಲ್ ಕುಮಾರ್ ಬೂಮರೆಡ್ಡಿ, ಡಿವೈಎಸ್‌ಪಿ ರೋಹಿಣಿ ಸಿ.ಕೆ., ವೃತ್ತ ನಿರೀಕ್ಷಕ ರವಿ ಬಿ.ಎಸ್ ನೇತೃತ್ವದಲ್ಲಿ ಪಿಎಸ್‌ಐ ಆನಂದ್, ಸಿಕಂದರ್ ಪಾಷಾ ಹಾಗೂ ಸೋಕೋ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿತ್ತು.

LEAVE A REPLY

Please enter your comment!
Please enter your name here